ವಿಚಾರಣೆಗೆ ಕರೆತಂದಿದ್ದ ಆರೋಪಿ ಪರಾರಿ
ಕಲಬುರಗಿ,ಸೆ.25-ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿಯೊಬ್ಬ ಮೂತ್ರ ವಿಸರ್ಜನೆ ಮಾಡುವ ನೆಪದಲ್ಲಿ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.
ಮದಿನಾ ಕಾಲೋನಿಯ ಈದ್ಗಾ ಲೇಔಟ್‍ನ ಖಾಜಾಪಾಶಾ ತಂದೆ ರಿಯಾಜ್ ಪಾಶಾ (21) ಎಂ¨ ಆರರೋಪಿಯೇ ಪರಾರಿಯಾಗಿದ್ದು, ಈ ಸಂಬಂಧ ಸಬ್-ಅರ್ಬನ್ ಪೊಲೀಸ್ ಠಾಣೆಯ ಮುಖ್ಯಪೇದೆ ಶಿವಪುತ್ರ ಅವರು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಖಾಜಾಪಾಶಾ ಅವರನ್ನು ವಿಚಾರಣೆ ನಡೆಸಲೆಂದು ಸಬ್-ಅರ್ಬನ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಬೆಳಗಿನ ವೇಳೆ ಮೂತ್ರ ವಿಸರ್ಜನೆ ಮಾಡುವ ನೆಪದಲ್ಲಿ ಆರೋಪಿ ಪೊಲೀಸ್ ಸಿಬ್ಬಂದಿಯನ್ನು ನೂಕಿ ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ತನಿಖೆ ನಡೆದಿದೆ.