ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಲಬುರಗಿ:ಜೂ.19: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜೂನ್ 22 ರಂದು ಬೆಳಿಗ್ಗೆ 9.20ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡುವರು. ಜೂನ್ 23 ರಂದು ಬೆಳಿಗ್ಗೆ 9.45ಕ್ಕೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು.