ಕೇಂದ್ರದ ನೂತನ ಸರ್ಕಾರ ಮುಸ್ಲಿಂರ ಹಿತ ಕಾಪಾಡಲಿ
ಅಥಣಿ :ಜೂ.19: ಅಲ್ಲಾಹನ ಇಚ್ಚೆಯಂತೆ ಪ್ರವಾದಿ ಇಬ್ರಾಹೀಮರು ತಮ್ಮ ಇಳಿವಯಸ್ಸಿನಲ್ಲಿ ಪುತ್ರ ಇಸ್ಮಾಯಿಲ್‍ರನ್ನು ಬಲಿ ಕೊಡಲು ಸಿದ್ಧರಾದರು. ಆ ಘಟನೆಯ ಪ್ರತೀಕವಾಗಿ ಬಕ್ರಿ?ದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬಕ್ರಿದ್ ಹಬ್ಬವು ಅಥಣಿ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಈದ್ಗಾ ಹಾಗೂ ಮಸೀದಿಗಳಲ್ಲಿ ಶೃದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಮಾತನಾಡಿ ದೇಶದಲ್ಲಿ ಅಲ್ಲಾಹನ ಕೃಪೆಯಿಂದ ಮಳೆ ಬೆಳೆ ಸಮೃದ್ಧಿಯಾಗಲಿ ಜನರು ಶಾಂತಿಯಿಂದ ಸಹೋದರತೆ. ಭಾವೈಕ್ಯತೆ. ಸೌಹಾರ್ದತೆಯಿಂದ ಎಲ್ಲ ಧರ್ಮಿಯರು ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿ ಬಾಳಲಿ ಬೇಡಿಕೊಂಡರು. ಪಟ್ಟಣದಲ್ಲಿ ಹಾಗೂ ತಾಲೂಕಿನಲ್ಲಿ ಬೇರೆ ಗ್ರಾಮಗಳಲ್ಲಿ ದೇವರ್ ದಯೆಯಿಂದ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಹಿಂದೂ ಮುಸ್ಲಿಂ ಬಾಂಧವರು ಅಣ್ಣ ತಮ್ಮಂದಿರಂತೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮ ಸಡಗರದೊಂದಿಗೆ ಹಬ್ಬ ಆಚರಣೆ ಮಾಡಲಾಗಿದೆ ಎಲ್ಲಿಯೂ ಕೂಡ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿ ಕೊಂಡಿರುವ ಪೆÇಲೀಸ್ ಅಧಿಕಾರಿಗಳಿಗೆ ಹಾಗು ತಾಲೂಕಿನ ಎಲ್ಲ ಸಮುದಾಯದ ಬಾಂಧರಿಗೆ ಅಭಿನಂದನೆ ಸಲ್ಲಿಸುತ್ತೇನೆ ಭಾರತ ದೇಶವು ಜಗತ್ತಿನಲ್ಲಿ ಉನ್ನತ ಸ್ಥಾನ ಅಲಂಕರಿಸಲಿ ಹಾಗೂ ದೇಶದಲ್ಲಿ ರಚನೆಯಾಗಿರುವ ನೂತನ ಸರ್ಕಾರವು ದೇಶದಲ್ಲಿರುವ ಎಲ್ಲ ಸಮುದಾಯಗಳ. ಎಲ್ಲ ಧರ್ಮಿಯರು ಅದರಲ್ಲೂ ವಿಶೇಷವಾಗಿ ಮುಸ್ಲಿಂ ಬಾಂಧವರ ರಕ್ಷಣೆ. ಪ್ರಗತಿ ಮತ್ತು ಏಳಿಗೆಗೆ ಶ್ರಮಿಸುವಂತಾಗಲಿ ಎಂದು ಅಲ್ಲಾನಲ್ಲಿ ಪ್ರಾರ್ಥಿಸುತ್ತೇನೆ ಎಂದರು.