ಗುಂಡಿಕ್ಕಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ವಿಜಯಪುರ,ಜೂ.19 :ಕಳೆದ ಕೆಲ ದಿನಗಳ ಹಿಂದೆ ಚಡಚಣ ಪಟ್ಟಣದಲ್ಲಿ ಅಶೋಕ ಗಂಟಗಲ್ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದಾರೆ.
ಚಡಚಣದ ಇಸ್ಮಾಯಿಲ್ ಶೇಖ (29), ಜಾಫರ್ ಮಸಳಿ (36) ಬಂಧಿತ ಆರೋಪಿಗಳು.
ಜೂ.16 ರಂದು ಅಶೋಕನಿಗೆ ಹಳೆಯ ದ್ವೇಷದಿಂದ ಗುಂಡು ಹಾರಿಸಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿಸಿಆರ್ ಬಿ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಅವರ ಮಾರ್ಗದರ್ಶನದಲ್ಲಿ ಇಂಡಿ ಡಿಎಸ್ಪಿ ಜಗದೀಶ್ ಎಚ್. ಎಸ್. ಚಡಚಣ ಸಿಪಿಐ ಸುರೇಶ ಬೆಂಡೆಗುಂಬಳ ಅವರ ನೇತೃತ್ವದಲ್ಲಿ ಪಿಎಸ್ ಐ ಸಂಜಯ ಕಲ್ಲೂರ, ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತನಿಖಾ ತಂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಹಿಂದಿನ ವೈಷಮ್ಯದಿಂದ ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ. ಆರೋಪಿತರ ಕಡೆಯಿಂದ ಒಂದು ಕಂಟ್ರಿ ಪಿಸ್ತೂಲ್ ಹಾಗೂ 3 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನುಳಿದ ಆರೋಪಿತರನ್ನು ಬಂಧಿಸುವ ನಿಟ್ಟಿನಲ್ಲಿ ಪ್ರಕರಣದ ತನಿಖೆ ಮುಂದುವರೆದಿದೆ.