ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜೂ.19 : ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಕುಡಿಯುವ ನೀರಿನ ಸಮಸ್ಯೆ, ಬೆಳೆ ಪರಿಹಾರ ಸಮಸ್ಯೆ, ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.