ನಾಳೆ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು ಬಳ್ಳಾರಿ ಹಾಗು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಂಗಳೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಂಜೆ 4.50 ಕ್ಕೆ ಬರುವ ಅವರು ನಂತರ 6 ಕ್ಕೆ  ಜಿಂದಾಲ್ ಟೌನ್ ಶಿಪ್ ನಲ್ಲಿ ನಡೆಯುವ 2024 ರ “ಯೋಗರತ್ನ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿಯೇ ವಾಸ್ತವ್ಯ ಹೂಡುವ ಅವರು. ಮರುದಿನ ನಾಡಿದ್ದು ಜೂ,21 ರಂದು ಬೆಳಿಗ್ಗೆ 7 ಕ್ಕೆ ಜಿಂದಾಲ್ ಟೌನ್ ಶಿಪ್ ನಲ್ಲಿ ಹಮ್ಮಿಕೊಂಡಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಹೊಸಪೇಟೆಗೆ ತೆರಳಿ 11 ಗಂಟೆಗೆ ಡಿಸಿ ಸಭಾಂಗಣದಲ್ಲಿ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 4 ಕ್ಕೆ ಜಿಂದಾಲ್ ಗೆ ಬಂದು ಬೆಂಗಳೂರಿಗೆ ತೆರಳಲಿದ್ದಾರೆ.