ಕೆಪಿಸಿಸಿ ಕಚೇರಿಯಲ್ಲಿ ರಾಹುಲ್ ಹುಟ್ಟುಹಬ್ಬ ಆಚರಣೆ
ಬೆಂಗಳೂರು.ಜೂ,೧೯- ಕಾಂಗ್ರೆಸ್ ನಾಯಕ ಹಾಗೂ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಹುಟ್ಟುಹಬ್ಬ ಆಚರಿಸಲಾಯಿತು. ಇಂದು ಬೆಳಗ್ಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿರವರ ಜನ್ಮ ದಿನಾಚರಣೆ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಲಾಯಿತು.ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂಗವಿಕಲರಿಗೆ ಉಚಿತ ಸೈಕಲ್ ವಿತರಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ನೀಡಿದರು.ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್, ಸತ್ಯನಾರಾಯಣ್ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.