ಚಿಂಚೋಳಿ ತಾಪಂ: ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಚಿಂಚೋಳಿ,ಜೂ.19- ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಂಕರ್ ರಾಠೋಡ್, ರವರ ಅಧ್ಯಕ್ಷತೆಯಲ್ಲಿ ತರಬೇತಿ ಶಿಬಿರ ಜರುಗಿತು.
ಜಲ ಜೀವನ್ ಮಿಷನ್ (ಜೆಜೆಎಂ) ಮತ್ತು ಸ್ವಚ್ಛ ಭಾರತ ಮಿಷನ್ (ಗ್ರಾ) (ಎಸ್‍ಬಿಎಂ) ಯೋಜನೆಗಳು, ಶಿಕ್ಷಣ ಮತ್ತು ಸಂವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳು ಎಫ್‍ಟಿಕೆ ತರಬೇತಿ ಕಾರ್ಯಕ್ರಮ ನಡೆಯಿತು.
ಈ ತರಬೇತಿ ಶಿಬಿರದಲ್ಲಿ ಸಹಾಯಕ ನಿರ್ದೇಶಕರು (ಪಂ.ರಾ), ಜೇ.ಇ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಚಿಂಚೋಳಿ, ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್, ಪಂಪ್ ಆಪರೇಟರ್, ತಾ.ಪಂ. ಸಿಬ್ಬಂದಿಯವರು ಹಾಜರಿದ್ದರು