ಬೈಕ್ ಗೆ ಟಿಪ್ಪರ್ ಡಿಕ್ಕಿದರೋಜಿಯ ದಂಪತಿಗಳು ಸಾವು ಮಗು ಪಾರು
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜೂ.18: ತಾಲೂಕಿನ ಅಮರಾಪುರ ಗ್ರಾಮದ ಬಳಿ‌ ಇಂದು ಸಂಜೆ ಟಿಪ್ಪರ್ ಡಿಕ್ಕಿಯಾಗಿ ಬೈಕ್‌ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು 8 ವರ್ಷದ ಮಗು ಜೀವಂತವಾಗಿ ಪಾರಾಗಿರಯವ ಘಟನೆ ನಡೆದಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ನಾಗರಾಜ್ (40) ಹಾಗೂ ಪಾರ್ವತಿ (37) ಮೃತರಾಗಿದ್ದಾರೆ.
ಪತ್ನಿ ಹಾಗೂ ಮಗುವಿನೊಂದಿಗೆ ನಾಗರಾಜ್ ಚೇಳಗುರ್ಕಿಯಿಂದ ಬಳ್ಳಾರಿ ಕಡೆಗೆ ಬರುತ್ತಿದ್ದ.ನಾಗರಾಜ್ ಹಾಗೂ ಪಾರ್ವತಿ ತಲೆ ಭಾಗದಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಗಾಯಗೊಂಡ ಮಗುವಿಗೆ ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.