ನೀರು ಕುಡಿಯಬೇಡಿ, ಇತರೆ ಕಾರ್ಯಕ್ಕೆ ಬಳಕೆ ಮಾಡಬೇಕೆಂದು ಕೆ.ಯು.ಐ.ಎಫ್.ಡಿ.ಸಿ. ಸಲಹೆ
ಕಲಬುರಗಿ:ಜೂ.18: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಎರಡು ಜಲ ಮೂಲಗಳಾದ ಭೀಮಾ ಹಾಗೂ ಬೆಣ್ಣೆತೋರಾ ನದಿಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಪಾಲಿಕೆಯಿಂದ ಪೂರೈಸುವ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ಸರಬರಾಜಾಗುತ್ತಿದ್ದು, ಸಾರ್ವಜನಿಕರು ಇದನ್ನು ಕುಡಿಯಕ್ಕೆ ಬಳಸದೆ ಇತರೆ ಕೆಲಸ ಕಾರ್ಯಕ್ಕೆ ಬಳಕೆ ಮಾಡಬೇಕೆಂದು ಕೆ.ಯು.ಐ.ಎಫ್.ಡಿ.ಸಿ. ಕಾರ್ಯಪಾಲಕ ಅಭಿಯಂತ ಆರ್.ಪಿ.ಜಾಧವ ತಿಳಿಸಿದ್ದಾರೆ.
ಪಾಲಿಕೆಯಿಂದ ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಪೂರೈಕೆ ಮಾಡುತ್ತಿದರೂ ಮಣ್ಣು ಮಿಶ್ರಿತ ನೀರು ಪೂರೈಕೆಯಾಗುತ್ತಿರುವುದರಿಂದ ಸಾರ್ವಜನಿಕರು ನೀರನ್ನು ಕುಡಿಯಬಾರದೆಂದು ಮತ್ತು ಕಲಬುರಗಿ ಮಹಾನಗರ ಪಾಲಿಕೆ, ಕೆ.ಯು.ಐ.ಡಿ.ಎಫ್.ಸಿ ಹಾಗೂ ಎಲ್&ಟಿ ಲಿಮಿಟೆಡ್ ಸಂಸ್ಥೆಯೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.