ಸೈದಾಪುರ: ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ
ಸೈದಾಪುರ:ಜೂ.18:ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಶ್ರದ್ಧಾ ಭಕ್ತಿ ಸಡಗರದಿಂದ ಆಚರಣೆ ಮಾಡಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಮಕ್ಕಳು, ಹಿರಿಯರು, ಕಿರಿಯರು ಎನ್ನದೆ ಎಲ್ಲರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನಂತರ ಧರ್ಮ ಗುರುಗಳು ಹಬ್ಬದ ಮಹತ್ವದ ಸಂದೇಶ ಸಾರಿ, ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಸೈದಾಪುರ ಸೇರಿದಂತೆ ಸುತ್ತಲಿನ ಗ್ರಾಮಗಳ ಮುಸ್ಲಿಂ ಬಾಂಧವರು ಅದ್ಧೂರಿಯಾಗಿ ಹಬ್ಬವನ್ನು ಆಚರಿಸಿದರು.