ಕಾಂಗ್ರೆಸ್ ಸರಕಾರ ಜನ ವಿರೋಧಿ : ರಮೇಶ ಜಿಗಜಿಣಗಿ ಟೀಕೆ
ವಿಜಯಪುರ :ಜೂ.18: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಜನ ವಿರೋಧಿಯಾಗಿದೆ. ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿದ ಮಾರಾಟ ತೆರಿಗೆಯನ್ನು ವಾಪಸ್ ಪಡೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು, ಬಡವರ ಪರ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಇಂಧನದ ಮೇಲೆ ತೆರಿಗೆ ಹೆಚ್ಚಿಸಿದ್ದಾರೆ. ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ಹೇಳಿ ವಾಣಿಜ್ಯಕ್ಕೆ ಬಳಕೆಯಾಗುವ ವಿದ್ಯುತ್ ದರ ಹೆಚ್ಚಳ ಮಾಡಿ ಮೋಸ ಮಾಡಿದ್ದಾರೆ. ಮನಸೋ ಇಚ್ಛೆ ನಡೆಸುತ್ತಿರುವ ಇವರ ಆಡಳಿತದಿಂದ ಬಡವರಿಗೆ ಹೊರೆಯಾಗಿದೆ. 5 ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಅನುμÁ್ಠನಗೊಳಿಸಿಲ್ಲ. ಬೆಲೆ ಏರಿಕೆಗಳನ್ನು ಗಮನಿಸಿದರೆ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಟೀಕಿಸಿದÀರು.