ಸಚಿವ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾ ಪ್ರವಾಸ
ಧಾರವಾಡ,ಜೂ18: ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಹಾಗೂ ಸ್ಟೀಲ್ ಉದ್ಯಮ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜೂ.18 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು ಮಧ್ಯಾಹ್ನ 1:30 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 2:30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು. ಅಲ್ಲಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ಮಧ್ಯಾಹ್ನ 4 ಗಂಟೆಯವೆರೆಗೆ ಕೃಷಿ ವಿಶ್ವವಿದ್ಯಾಲಯ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡುವರು. ನಂತರ ಸಂಜೆ 4 ಗಂಟೆಗೆ ಕೃಷಿ ವಿಶ್ವವಿದ್ಯಾಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪಿಎಂ-ಕಿಸಾನ್ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸುವರು.