ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ತಳ್ಳು ಗಾಡಿ ಮೇಲೆ ಸ್ಕೂಟರ್ ನಿಲ್ಲಿಸಿ ಬಿಜೆಪಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.18:- ರಾಜ್ಯ ಸರ್ಕಾರ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ಹೊರಟ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ದ ದಿಕ್ಕಾರ ಘೋಷಣೆಗಳನ್ನ ಕೂಗಿ, ಭಿತ್ತ ಪತ್ರಗಳನ್ನು ಪ್ರದರ್ಶನ ಮಾಡಿದರು.
ತಳ್ಳು ಗಾಡಿಯಲ್ಲಿ ಬೈಕ್ ಕಟ್ಟಿಕೊಂಡು ಅಣುಕ ಯಾತ್ರೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಮತ ಹಾಕಿದ ರಾಜ್ಯ ಜನತೆ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಬೈಕ್ ಓಡಿಸಲು ಆಗದಂತಹ ಪರಿಸ್ಥಿತಿಗೆ ತಂದು ನಿಲ್ಲಿಸಿದೆ. ಹಗ್ಗ ಕಟ್ಟಿಕೊಂಡು ಎಳೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಂಬಿಸುವ ಮೂಲಕ ಸಾರ್ವಜನಿಕಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ವಂಚನೆ ಮಾಡುತ್ತಿದೆ ಎಂದು ಜಾಗೃತಿ ಮೂಡಿಸಿ, ಭುವನೇಶ್ವರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿ, ಈಗ ಅಧಿಕಾರ ಬಂದಿದೆ. ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಏನು. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಐದು ಗ್ಯಾರಂಟಿಗಳನ್ಮ್ನ ರಾಜ್ಯ ಜನರಿಗೆ ನೀಡಿದ್ದೇವೆ ಎಂದು ಪುಕ್ಕಟೆ ಪ್ರಚಾರ ಪಡೆದುಕೊಳ್ಳುತ್ತಿದೆ. ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣ, ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವುದು, 200 ಯೂನಿಟ್ ಉಚಿತ ವಿದ್ಯುತ್, ಯುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನ, ಐದು ಕೆಜಿ ಉಚಿತ ಅಕ್ಕಿ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷÀ ಇದ್ಯಾವುದನ್ನು ಸರಿಯಾಗಿ ಈಡೇರಿಸಿಲ್ಲ. ಈ ಐದು ಗ್ಯಾರಂಟಿಗಳು ರಾಜ್ಯದ ಜನರಿಗೆ ತಲುಪುವ ಮುನ್ನವೇ ರಾಜ್ಯದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡಬೇಕೆಂದು ಡಿಸೇಲ್, ಪೆಟ್ರೋಲ್ ದರವನ್ನು 3 ರಿಂದ 4 ರೂ.ಗಳವರೆಗೆ ಏರಿಕೆ ಮಾಡುವ ಮೂಲಕ ಬಡವರು ಹಾಗೂ ಮಾಧ್ಯಮ ವರ್ಗದವರು, ರೈತ ಸಮುದಾಯದ ಮೇಲೆ ಚಪ್ಪಡಿ ಎಳೆದಿದೆ ಎಂದು ದೂರಿದರು.
ಈ ಕೂಡಲೇ ರಾಜ್ಯ ಸರ್ಕಾರ ಇಂಧನ ದರ ಏರಿಕೆಯ ಪ್ರಸ್ತಾಪವನ್ನು ಕೈಬಿಟ್ಟು ಇತರೇ ರಾಜ್ಯಗಳ ಮಾದರಿಯಲ್ಲಿ ಏಕ ರೂಪ ತೆರಿಗೆ ವಿಧಿಸಿ, ಈಗ ಏರಿಕೆ ಮಾಡಿರುವ ದರವನ್ನು ಕೂಡಲೇ ಇಳಿಸಬೇಕು.
ತಪ್ಪಿದ್ದಲ್ಲಿ ರಾಜ್ಯದ ಜನರೊಂದಿಗೆ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ನಿರಂಜನ್‍ಕುಮಾರ್ ಎಚ್ಚರಿಕೆ ನೀಡಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಮಾತನಾಡಿ, ಇದೊಂದು ಗೊತ್ತು ಗುರಿ ಇಲ್ಲದ ಅಭಿವೃಧ್ದಿ ಶೂನ್ಯವಾದ ಸರ್ಕಾರವಾಗಿದೆ. ಗ್ಯಾರಂಟಿ ಯೋಜನೆಯಿಂದಲೇ ನಮ್ಮ ಸರ್ಕಾರ ಜನಪ್ರಿಯವಾಗುತ್ತದೆ ಎಂಬ ಭ್ರಮೆಯಲ್ಲಿದ್ದ ಸಿದ್ದರಾಮಯ್ಯ ಮತ್ತು ತಂಡಕ್ಕೆ ರಾಜ್ಯ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಳಿಸಿದ್ದಾರೆ. 9 ಸ್ಥಾನಗಳನ್ನು ನೀಡುವ ಮೂಲಕ ನಿಮ್ಮ ಗ್ಯಾರಂಟಿ ಯೋಜನೆ ನಮಗೆ ಬೇಡ. ದೇಶದ ಹಾಗೂ ರಾಜ್ಯ ಅಭಿವೃದ್ದಿಯಾಗಬೇಕೆಂಬ ಸಂದೇಶವನ್ನು ನೀಡಿದ್ದಾರೆ. ಹೀಗಿದ್ದರು ಕೂಡ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರನ್ನು ವಂಚಿಸಲು ಮುಂದಾಗಿದ್ದಾರೆ. ಯಾವುದೇ ಅಭಿವೃದ್ದಿ ಕಾರ್ಯಕ್ರಮಗಳಿಗೆ ಹಣ ನೀಡುತ್ತಿಲ್ಲ. ಇದೊಂದು ಅನಿಷ್ಟ ಸರ್ಕಾರ ಎಂದು ವಾಗ್ದಾಳಿ ಮಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಮುಖಂಡರಾದ ಎಂ. ರಾಮಚಂದ್ರು, ನಿಜಗುಣರಾಜು, ನೂರೊಂದುಶೆಟ್ಟಿ, ಅರಕಲವಾಡಿ ನಾಗೇಂದ್ರ, ಪ್ರಣಯ್, ಮಂಡಲದ ಅಧ್ಯಕ್ಷರಾದ ಅರಕಲವಾಡಿ ಮಹೇಶ್, ಶಿವರಾಜ್, ಚಾಮುಲ್ ಅಧ್ಯಕ್ಷ ನಾಗೇಂದ್ರ, ಕೆ. ವೀರಭದ್ರಸ್ವಾಮಿ, ಎಸ್. ಬಾಲಸುಬ್ರಮಣ್ಯ, ಸೂಂiÀರ್i ಬಾಲರಾಜು, ಆನಂದ್ ಭಗೀರಥ್, ಉಡಿಗಾಲ ಗ್ರಾ.ಪಂ. ಅಧ್ಯಕ್ಷೆ ರೇಖಾ, ಜಿಲ್ಲಾ ಉಪಾಧ್ಯಕ್ಷರಾದ ಮಮತಾ ಬಾಲಸುಬ್ರಮಣ್ಯ, ಸರೋಜ, ವನಾಜಾಕ್ಷಿ, ಆರ್. ಪುಟ್ಟಮಲ್ಲಪ್ಪ, ವಿರಾಟ್ ಶಿವು, ಮರಿಯಾಲ ಮಹೇಶ್, ಮೂಡಹಳ್ಳಿ ಮೂರ್ತಿ, ಮೊದಲಾದವರು ಇದ್ದರು.