ಪೆಟ್ರೋಲ್ ಡಿಸೇಲ್ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
ಕೋಲಾರ,ಜೂ,೧೮- ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪಕ್ಷವು ನಗರದ ವಿವೇಕಾನಂದ ವೃತ್ತ( ಡೊಂಲೈಟ್ ಸರ್ಕಲ್ ) ದಲ್ಲಿ ಕೆಲಕಾಲ ಮಾನವ ಸರಪಳಿ ರಚಿಸಿ ರಸ್ತೆ ನಡೆಸಿತು, ಎತ್ತಿನ ಬಂಡಿ, ಸೈಕಲ್ ಮೂಲಕ ವಿನುತವಾದ ಅಣುಕು ಪ್ರದರ್ಶನ ನಡೆಸಿ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ದ ಘೋಷಣೆಗಳು ಕೊಗಿ ಪ್ರತಿಭಟಿಸಿದರು,
ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಮತ್ತು ಬಂಗಾರಪೇಟೆ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಮಾತನಾಡಿ ರಾಜ್ಯ ಸರ್ಕಾರ ಲೋಕಸಣಾ ಚುನಾವಣೆ ಬಳಿಕ ರಾಜ್ಯದ ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ರಾಜ್ಯ ಸರ್ಕಾರವು ಗಾಯದ ಮೇಲೆ ಬರೆ ಎಳೆದಂತಾಗಿದೆ ಕಾಂಗ್ರೇಸ್ ಸರ್ಕಾರ ಕಳೆದ ವರ್ಷ ಅಧಿಕಾರಕ್ಕೆ ಬರುವ ಮುನ್ನ ಇಸ್ರೇಲ್ ಯುಧ್ದದ ಸಂದರ್ಭದಲ್ಲಿ ಡಿಸೇಲ್ ಪೆಟ್ರೋಲ್ ದರ ಏರಿಕೆ ಮಾಡಿದಾಗ ರಾಜ್ಯ ಬಸವರಾಜ ಬೊಮ್ಮಾಯಿ ಆಡಳಿತದ ಬಿಜೆಪಿ ಸರ್ಕಾರವು ಜನವಿರೋಧಿ ಸರ್ಕಾರವಾಗಿದ್ದು ಅಗತ್ಯ ವಸ್ತುಗಳ ಬೆಲೆಯನ್ನು ದಿನೇ ದಿನೇ ಏರಿಕೆ ಮಾಡುತ್ತಿದೆ ಎಂದು ಕಾಂಗ್ರೇಸ್ ಸರ್ಕಾರವು ಅರೋಪಿಸುತ್ತಿತ್ತು,
ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಗತ್ಯವಾದ ದಿನಬಳಕೆಯ ವಸ್ತುಗಳ ಬೆಲೆಗಳು ಇಳಿಕೆ ಮಾಡುತ್ತೇವೆ ಮತ್ತು ಉಚಿತವಾದ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಜನತೆಗೆ ಅಮಿಷವುಡ್ಡಿ ತದನಂತರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರೆಂಟಿಗಳ ಯೋಜನೆಗಾಗಿ ವಿದ್ಯುತ್ ದರ, ಬಸ್ ದರ, ಆಹಾರ ಧಾನ್ಯಗಳ ಬೆಲೆಗಳು ಹಾಲಿನ ದರ, ನೊಂದಣಿಯ ಸ್ಟಾಂಪ್ ದರ ಹೆಚ್ಚಳ, ಜೂತೆಗೆ ಅಗತ್ಯವಸ್ತುಗಳ ದರಗಳನ್ನು ಏರಿಕೆ ಮಾಡಲಾಗಿದೆ ಎಂದು ಆರೋಪಿಸಿದರು,
ಪ್ರತಿಭಟನೆಯ ನೇತ್ರತ್ವವನ್ನು ಜಿಲ್ಲಾ ಬಿಜೆಪಿ ಯುವ ಮುಖಂಡ ಓಂಶಕ್ತಿ ಚಲಪತಿ, ಬಂಗಾರಪೇಟೆ ಜಿ.ಪಂ. ಮಾಜಿ ಸದಸ್ಯ ಮಹೇಶ್, ಮಾಜಿ ಶಾಸಕ ವರ್ತೂರು ಪ್ರಕಾಶ್, ನಿವೃತ್ತ ಡಿ.ವೈ.ಎಸ್.ಪಿ. ಶಿವಕುಮಾರ್.ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ, ನಗರಸಭೆ ಮಾಜಿ ಉಪಾಧ್ಯಕ್ಷ ಪ್ರವೀಣ್ ಗೌಡ, ಪದಾಧಿಕಾರಿಗಳಾದ ಕೆಂಬೋಡಿ ನಾರಾಯಣಸ್ವಾಮಿ,ತಲೆಗುಂದ ನರಸಿಂಹಮೂರ್ತಿ, ಬೆಗ್ಲಿಸೂರ್ಯ ಪ್ರಕಾಶ್ ಮುಂತಾದವರು ಹಾಜರಿದ್ದರು,