ಚುರುಕುಗೊಂಡ ಬಿಜೆಪಿ ಸದಸ್ಯತ್ವ ಅಭಿಯಾನ
ಬೀದರ:ಸೆ.25: ಬೀದರ ಬಿ ವ್ಹಿ ಬಿ ಕಾಲೇಜ ಹತ್ತಿರವಿರುವ ಎಲ್ಲಾ ಸಣ್ಣ ವ್ಯಾಪಾರಿಗಳ, ಯುವಕರ ಹಾಗೂ ಹಿರಿಯರನ್ನು ಬಿಜೆಪಿ ಸದಸ್ಯತ್ವವನ್ನು ಮಾಡಲಾಯಿತು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವಿಜಯಕುಮಾರ ಎಸ್ ಪಾಟೀಲ್ ಗಾದಗಿ ನೇತೃತ್ವದಲ್ಲಿ ಜಿಲ್ಲಾ ವಕ್ತಾರ ಗುರುನಾಥ ರಾಜಗೀರಾ ಹಾಗೂ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿರೇಶ್ ಸ್ವಾಮಿ ಅವರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಕೂಡ ಬಿಜೆಪಿ ಸದಸ್ಯರನ್ನಾಗಿ ಮಾಡುವ ನಿಟ್ಟಿನಲ್ಲಿ ಯುವಕರು, ಹಿರಿಯರು, ಕಾರ್ಮಿಕರು, ಉದ್ಯಮಿಗಳು, ಸಣ್ಣ ಸಣ್ಣ ವ್ಯಾಪಾರಸ್ಥರು ಇಂದು ಸಂತೋಷವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಪಡೆದಿದ್ದು, ಇಲ್ಲಿಯವರೆಗೆ 1.30 ಲಕ್ಷಕ್ಕೂ ಹೆಚ್ಚು ಸದಸ್ಯರಾಗಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷರಾದ ವಿಜಯಕುಮಾರ ಪಾಟೀಲ್ ಗಾದಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.