ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ನಾಲ್ವರು ಸಾವು :ಕುಟುಂಬಸ್ಥರಿಗೆ ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ
ಯಾದಗಿರಿ : ಸೆ.25 : ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟ ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.