ಪೆಟ್ರೋಲ್, ಡಿಸೇಲ್ ದರ ಹೆಚ್ಚಳ: ಎಸ್.ಯು.ಸಿ.ಐ ಖಂಡನೆ
ವಿಜಯಪುರ,ಜೂ.17:ಚುನಾವಣೆಗಳು ಮುಗಿಯುತ್ತಿದ್ದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿ ಲೀಟರಿಗೆ ತಲಾ ರೂ. 3 ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸಿದೆ.
ಈ ಸಂಬಂಧ ಎಸ್‍ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನರೆಡ್ಡಿ ಆವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಹೆಚ್ಚಳದಿಂದಾಗಿ ರಾಜ್ಯ ಖಜಾನೆಗೆ ಈ ಆರ್ಥಿಕ ವರ್ಷದಲ್ಲಿ ಸುಮಾರು ರೂ.3000 ಕೋಟಿ ಹೆಚ್ಚುವರಿ ತೆರಿಗೆ ವಸೂಲಿಯಾಗಲಿದೆ. ಇದರಿಂದ ಸಾರಿಗೆ, ಸರಕು ಸಾಗಾಣಿಕೆ ವೆಚ್ಚ ಏರಿಕೆಯಾಗಿ ಬೆಲೆ ಏರಿಕೆಯ ಮೇಲೆ ಸರಣಿ ಪರಿಣಾಮ ಉಂಟಾಗಲಿದೆ. ತರಕಾರಿ, ದವಸಧಾನ್ಯಗಳ ಬೆಲೆ ಏರಿಕೆಯಿಂದ ಕಂಗಾಲಾದ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಪ್ರತಿ ಲೀಟರ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ತೆರಿಗೆಯೇ ಇದೆ. ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚೆ ಕೇಂದ್ರ ಬಿಜೆಪಿ ಸರ್ಕಾರವು ಮತದಾರರನ್ನು ಓಲೈಸಲು 2ರೂ. ಕಡಿತ ಮಾಡಿತ್ತು. ರμÁ್ಯ – ಉಕ್ರೇನ್ ಯುದ್ಧದ ಲಾಭ ಪಡೆದು ಭಾರತ ಸರ್ಕಾರವು ಜಾಗತಿಕ ದರಕ್ಕಿಂತ ಸುಮಾರು ಶೇ. 35ರಷ್ಟು ಕಡಿಮೆಗೆ ಕಚ್ಚಾ ತೈಲವನ್ನು ಖರೀದಿ ಮಾಡಿದರೂ, ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಿಲ್ಲ. ಲಕ್ಷಾಂತರ ಕೋಟಿ ರೂಪಾಯಿಗಳನ್ನು ಭಾರತದ ತೈಲ ಕಂಪನಿಗಳು ಕೊಳ್ಳೆ ಹೊಡೆದಿವೆ. ಈ ಸಾರ್ವಜನಿಕ ತೆರಿಗೆಯನ್ನು ಮೋದಿ ಸರ್ಕಾರವು ಕಾಪೆರ್Çರೇಟ್ ಬಂಡವಾಳಶಾಹಿಗಳ ಅನುಕೂಲಕ್ಕೆ ಬಳಸಿಕೊಂಡಿದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಒಂದು ದೇಶ- ಒಂದು ತೆರಿಗೆ ಘೋಷಣೆಯೊಂದಿಗೆ ಬಂದ ಜಿಎಸ್‍ಟಿಯನ್ನು ಅತ್ಯಂತ ಮಹತ್ವದ ಪೆಟ್ರೋಲಿಯಂ ಉತ್ಪನ್ನಗಳಿಗೆ ಅನ್ವಯ ಮಾಡಿಲ್ಲ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮಗಿಷ್ಟ ಬಂದಂತೆ ತೆರಿಗೆಗಳನ್ನು ಹೇರುತ್ತಿವÉ ಎಂದು ಟೀಕಿಸಿದರು.
ಅದೇ ದಾರಿಯಲ್ಲಿ ಈಗ ರಾಜ್ಯ ಕಾಂಗ್ರೆಸ್ ಸರ್ಕಾರವು ಕೂಡ ಈ ಜನವಿರೋಧಿ ತೀರ್ಮಾನವನ್ನು ಕೈಗೊಂಡಿದೆ. ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಈ ಕ್ರಮವು ತಮಗೆ ಮಾಡಿದ ವಂಚನೆಯೆಂದು ಜನತೆ ಭಾವಿಸುತ್ತಾರೆ. ಆದ್ದರಿಂದ ಜನರ ಮೇಲಿನ ಈ ಬೆಲೆ ಏರಿಕೆಯನ್ನು ಈ ತಕ್ಷಣವೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.