ಪೆಟ್ರೋಲ್, ಡೀಸೆಲ್ ಏರಿಕೆ ಹಿಂಪಡೆಯಲು ಒತ್ತಾಯ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.17:- ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರ ಮತ್ತು ಗ್ರಾಮಾಂತರ ಬಿಜೆಪಿವತಿಯಿಂದ ಜೂ.17ರ ಬೆಳಗ್ಗೆ 10.30ಕ್ಕೆ ನಗರದ ಹೊಸ ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ತಿಳಿಸಿದರು.
ಈ ಮೊದಲೆಲ್ಲ ಪೆಟ್ರೋಲ್, ಡೀಸೆಲ್ ದರ ಏರಿಕೆ ಆದರೆ ಕೇಂದ್ರದತ್ತ ಕೈತೋರಿಸುತ್ತಿದ್ದರು. ಆದರೆ ಈಗ ಪಂಚ ಗ್ಯಾರೆಂಟಿಗಳ ಕಾರಣ ರಾಜ್ಯ ಸರಕಾರ ದಿವಾಳಿಯಾಗಿದ್ದು, ಒಂದು ಕೈಯಲ್ಲಿ ಗ್ಯಾರೆಂಟಿ ನೀಡಿ, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನರಿಗೆ ಹೊರೆ ಯಾಗುತ್ತಿದ್ದುಘಿ, ಸರಕಾರ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಮುತ್ತಿಗೆ ಹಾಕಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರನ್ನು ಹಾಗೂ ಜನರನ್ನು ಮೆಚ್ಚಿಸಲು ಗ್ಯಾರೆಂಟಿ ಜಾರಿಗೊಳಿಸಿದ ಕಾರಣ ರಾಜ್ಯ ಸರಕಾರದ ಖಜಾನೆ ಬರಿದಾಗಿದೆ. ಸ್ಟ್ಯಾಂಪ್ ಶುಲ್ಕ ಶೆ. 20 ಇದ್ದುದನ್ನು 120ಕ್ಕೆ ಏರಿಸಲಾಗಿದೆ. ಇದಲ್ಲದೆ ನಾಲ್ಕು ತಿಂಗಳಲ್ಲಿ 450 ಕೊಲೆ, 190 ಲೈಂಗಿಕ ದೌರ್ಜನ್ಯ ನಡೆದಿವೆ. ಕಳೆದ ಹತ್ತು ತಿಂಗಳ್ಲಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.
ಈ ಹಿಂದೆ ಬಿಜೆಪಿ ಸರಕಾರ ಇದ್ದ ವೇಳೆ ಕೇಂದ್ರದ ಮೇಲೆ ಅವಲಂಭಿತರಾಗದೇ ರೈತರಿಗೆ ನೆರವಾಗಲಾಗುತ್ತಿತ್ತು. ಇನ್ನು, ಬಿಜೆಪಿ ಸರಕಾರದ ಅವಧಿಯಲ್ಲಿ ನಿಗಮ ಮಂಡಳಿಗಳಿಗೆ 546 ಕೋಟಿ ನೀಡಿದ್ದರೆ, ಕಾಂಗ್ರೆಸ್ ಸರಕಾರ ಕೇವಲ 170 ಕೋಟಿ ನೀಡಿದೆ.
ರಾಜ್ಯ ಕಾಂಗ್ರೆಸ್ ಸರಕಾರ ಹಿಂದುಳಿದವರ ಪರವಾಗಿದೆ ಎಂದು ಸಿಎಂ ಹೇಳಿಕೊಂಡರೂ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರ ಟಿಸಿಗೆ ಹತ್ತು ಸಾವಿರ ಇದ್ದುದನ್ನು ಮೂರರಿಂದ ಆರು ಲಕ್ಷಕ್ಕೆ ಏರಿಸಲಾಗಿದೆ. ಹೀಗಾಗಿ ಮತ ನೀಡಿದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾಂಗ್ರೆಸ್ ಆಡಳಿತದಿಂದ ರಾಜ್ಯದ ಜನತೆಗೆ ಆಗುತ್ತಿರುವ ತೊಂದರೆ ಅಷ್ಟಿಷ್ಟಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಇನ್ನೂ ಎಚ್ಚೆತ್ತುಕೊಳ್ಳದ ಗೃಹ ಸಚಿವರು ರಾಜೀನಾಮೆ ನೀಡಬೇಕು. ಈ ನಡುವೆ ತಮ್ಮ ಪಕ್ಷ ಸುಮ್ಮನೆ ಕುಳಿತಿಲ್ಲ. ಸರಕಾರ ವಿರುದ್ಧ ಹೋರಾಟ ನಡೆಸುತ್ತಿದೆ ಎಂದರು.
ರಾಜ್ಯ ಸರಕಾರ ಪೆಟ್ರೋಲ್ , ಡಿಸೇಲ್ ಇಳಿಸಲು ಮಣಿಯದಿದ್ದರೆ ರಾಜ್ಯ ಬಿಜೆಪಿ ನಾಯಕರ ಸೂಚನೆಯಂತೆ ಹೋರಾಟ ತೀವ್ರಗೊಳಿಸಲಾಗುವುದೆಂದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಾಜೇಂದ್ರ, ಕೇಬಲ್ ಮಹೇಶ್, ಮಹೇಶ್ ರಾಜೇ ಅರಸ್ ಮತ್ತಿತರರು ಇದ್ದರು.