ಹಬೋಹಳ್ಳಿ :ವಾಸವಿ ಯುವಜನ ಸಂಘದಿಂದ ಪರಿಸರ ದಿನಾಚರಣೆ
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಜೂ.16 ಪಟ್ಟಣದ  ಭಗವತಿ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ವಾಸವಿ ಯುವಜನ ಸಂಘದಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಪ್ರವೀಣ್ ಬೇಳೂರು, ಆರ್ಯವೈಶ್ಯ ಸಂಘ ಟ್ರಸ್ಟ್ ನ ಅಧ್ಯಕ್ಷರಾದ ಗಂಗಾವತಿ ಲಕ್ಷ್ಮಿಪತಿ ಮಹಿಳಾ ಸಮಾಜದ ಅಧ್ಯಕ್ಷರಾದ ವಿಜಯಲಕ್ಷ್ಮಿ ರಾಜೇಂದ್ರ ಪ್ರಸಾದ್ ಹಾಗೂ ವಾಸವಿ ವನಿತಾ ಸಂಘದ ಅಧ್ಯಕ್ಷರಾದ ಪವನ ಗಂಗಾವತಿ ಮತ್ತು ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ ದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಭರತ್ ಗಂಗಾವತಿ ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು
 .