ಸಂಗನಬಸವ ವಸತಿ ಪ.ಪೂ. ಕಾಲೇಜು ಹಾಗೂ ಅಂತರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸ್ವಾಗತ
ವಿಜಯಪುರ,ಜೂ.16:ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಸಂಗನಬಸವ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲಾಯಿತು.
ಸರಸ್ವತಿ ದೇವಿಯ ವಿಜೃಂಭಣೆಯ ಪೂಜೆಯೊಂದಿಗೆ ಶ್ರೀ ಸಿದ್ಧೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಎಸ್. ಹೀರೇಮಠ ಹಾಗೂ ಶೈಲಜಾ ಬಸನಗೌಡ ಪಾಟೀಲ (ಯತ್ನಾಳ) ಮತ್ತು ಸಂಸ್ಥೆಯ ಎಲ್ಲ ಪದಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ ಅವರು ಮಾತನಾಡಿ, ನಮ್ಮ ಹೆಮ್ಮೆಯ ಇಬ್ಬರು ಪಾಚಾರ್ಯರ ಮಾರ್ಗದರ್ಶನದಲ್ಲಿ ಎಲ್ಲ ಶಿಕ್ಷಕರು ಹಾಗೂ ಪ್ರಿಯ ವಿದ್ಯಾರ್ಥಿಗಳು ಭಾವಿ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದರು.
ಕಾಲೇಜಿನ ಪ್ರಾಚಾರ್ಯ ಪೆÇ್ರ. ಹೇಮಂತ ಕೃಷ್ಣÀ್ಣ ಅವರು ಮಾತನಾಡಿ, ಶ್ರೀ ಸಿದ್ಧೇಶ್ವರ ಸಂಸ್ಥೆಯ ಎಲ್ಲಾ ಅಂಗಸಂಸ್ಥೆಗಳ ಸವಿಸ್ತಾರ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಅದೇ ರೀತಿ ಸಂಗನಬಸವ ಅಂತರಾಷ್ಟ್ರೀಯ ವಸತಿ ಶಾಲೆಯ ಪ್ರಾಚಾರ್ಯೆ ಶರ್ಮಿಳಾ ಹೇಮಂತ್ ಅವರು ಹೇಗೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧಿಸಿದ್ದೇವೆ ಎಂದು ಅಂಕಿ ಅಂಶಗಳೊಂದಿಗೆ ಮಾಹಿತಿ ನೀಡಿದರು.
ಸಂಸ್ಥೆಯ ಚೇರಮನ್ ಬಸಯ್ಯ ಎಸ್. ಹೀರೇಮಠ ಅವರು ಎಲ್ಲ ಮಕ್ಕಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿ, ನಮ್ಮ ಸಂಸ್ಥೆ ಅಡಿಯಲ್ಲಿ ಸುಮಾರು ಶಾಲಾ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ಮಂತ್ರಿಯಾಗಿದ್ದಾಗ, ಆಗಿನ ಪ್ರಧಾನ ಮಂತ್ರಿಯಾಗಿದ್ದ ವಾಜಪೇಯಿ ಅವರ ಹೆಸರಲ್ಲಿ ಶಾಲೆಯೊಂದನ್ನು ತೆರೆದಿದ್ದಾರೆ ಎಂದು ನೆನಪಿಸಿದರು.
ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಅವರು ಶೈಕ್ಷಣಿಕ ವರ್ಷದ ಎಲ್ಲ ವಿದ್ಯಾರ್ಥಿಗಳಿಗೆÉ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕ ಗುರುದೇವ ಹೋಳಿ ಸ್ವಾಗತಿಸಿದರು. ಸೌಂದರ್ಯ ಹಿರೇಮಠ ನಿರೂಪಿದರು. ವೈಶಾಲಿ ಶೀಳಿನ ವಂದಿಸಿದರು.
ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ (ಯತ್ನಾಳ), ಎಲ್ಲ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.