ಬಿಎಸ್‍ವೈ ವಿರುದ್ಧ ಹಗೆತನದ ರಾಜಕಾರಣ: ಗುರುಪಾದ ಸ್ವಾಮಿ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.16:- ರಾಜ್ಯದ ಕಾಂಗ್ರೆಸ್ ಸರ್ಕಾರ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹಗೆತನ ಮತ್ತು ಹೇಡಿತನದ ರಾಜಕಾರಣ ನಡೆಸುತ್ತಿದೆ' ಎಂದು ಬಿಜೆಪಿ ಹಿರಿಯ ಮುಖಂಡ ಗುರುಪಾದ ಸ್ವಾಮಿ ಆರೋಪಿಸಿದರು. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರ ಅಸಹ್ಯಕರ ರಾಜಕಾರಣ ಆರಂಭಿಸಿದೆ. ಪೆÇೀಕ್ಸೊ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಚುನಾವಣೆ ಸಂದರ್ಭದಲ್ಲಿ ಬಂಧಿಸಿದರೆ ಮತಗಳು ಬರುವುದಿಲ್ಲ ಎಂಬ ಮುಂದಾಲೋಚನೆಯಲ್ಲಿ ಸುಮ್ಮನಿದ್ದು, ಈಗ ಬಂಧಿಸಲು ಪೆÇಲೀಸ ಇಲಾಖೆಗೆ ಹೇಳಿ ವಾರೆಂಟ್ ಹೊರಡಿಸಿದೆ’ ಎಂದು ಪತ್ರಿಕೆ ಪ್ರಕಟಣೆಯಲ್ಲಿ ದೂರಿದರು.
ಯಡಿಯೂರಪ್ಪ ಅವರ ಮೇಲೆ ಮಾರ್ಚ್ 4 ರಂದು ಪೆÇೀಕ್ಸೊ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅಂದೇ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ರವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ದೂರುದಾರ ಮಹಿಳೆ ಮಾನಸಿಕ ಅಸ್ವಸ್ಥೆ. ಆಕೆ ಹಿರಿಯ ಅಧಿಕಾರಿಗಳು ಸೇರಿದಂತೆ ಅಂದಾಜು 50 ಜನರ ಮೇಲೆ ಈಗಾಗಲೇ ಸುಳ್ಳು ಕೇಸುಗಳನ್ನು ದಾಖಲಿಸಿದ್ದಾಗಿ ಹೇಳಿದ್ದರು. ಆದರೆ ಈಗ ಅವರು ಆ ಬಗ್ಗೆ ಮಾತನಾಡುತ್ತಿಲ್ಲ' ಎಂದು ಹೇಳಿದರು. ಸಂತ್ರಸ್ಥೆ ಪರವಾಗಿ ದೂರು ನೀಡಿದ್ದ ಮಹಿಳೆ ಈಗಾಗಲೇ ತೀರಿಕೊಂಡಿದ್ದಾರೆ. ಆದರೂ ಯಡಿಯೂರಪ್ಪ ಅವರನ್ನು ಮಣಿಸುವ ಸಲುವಾಗಿ ಸಂಬಂಧಗಳನ್ನು ಮುಂದಿಟ್ಟು ಬಂಧಿಸುವ ಯತ್ನ ನಡೆಸಲಾಗಿದೆ. ಈ ಪ್ರಕರಣದ ಬಗ್ಗೆ ದೂರು ದಾಖಲು ಆದಾಗಲೇ ತನಿಖೆ ನಡೆಸಬಹುದಿತ್ತು. ಅದನ್ನು ಬಿಟ್ಟು ವೈಯಕ್ತಿಕ ದ್ವೇಷಕ್ಕಾಗಿ ಯಡಿಯೂರಪ್ಪ ಅವರನ್ನು ಈಗ ಬಂಧಿಸಲು ಸರ್ಕಾರ ಮುಂದಾಗಿರುವುದು ಹೇಡಿತನ’ ಎಂದು ಟೀಕಿಸಿದರು.
ಇದೇ ರೀತಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಮೇಲೆ ವಯಕ್ತಿಕ ದ್ವೇಷವನ್ನು ಸಾಧಿಸಲು ಹೊರಟರೆ ಸರಕಾರ ಮತ್ತು ಇಲಾಖೆಯ ಮೇಲೆ ಪಕ್ಷದ ವತಿಯಿಂದ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.