ಗರ್ಭಿಣಿಯರಿಗೆ ಪೌಷ್ಟಿಕಾಂಶ ವಿತರಣೆ, ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು
ಸಂಜೆವಾಣಿ ವಾರ್ತೆ
ನಂಜನಗೂಡು: ಜೂ.16:- ಲಯನ್ಸ್ ಕ್ಲಬ್ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಶ್ರಯದಲ್ಲಿ ಗರ್ಭಿಣಿಯರಿಗೆ ಪೌಷ್ಟಿಕಾಂಶ ವಿತರಣೆ ಹಾಗೂ ಬಾಲ್ಯ ವಿವಾಹದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವು ಚಾಮರಾಜನಗರ ನಂಜನಗೂಡು ಬೈಪಾಸ್ ರಸ್ತೆಯಲ್ಲಿರುವ ಶ್ರೀ ಮಾದೇಶ್ವರ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಶ್ರೀಮತಿ ಶಶಿಕಲಾ ಎರಡನೆಯ ಅಪಾರ ನ್ಯಾಯಾಧೀಶರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮುಂದುವರೆದು ಮಾತನಾಡಿ ಗರ್ಭಿಣಿ ಸ್ತ್ರೀಯರಿಗೆ ಪ್ರತಿ ದಿನ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು ಇಂತಹ ಕಾರ್ಯಕ್ರಮಗಳು ಸಂಘ ಸಂಸ್ಥೆಗಳು ಹೆಚ್ಚು ಹೆಚ್ಚು ನಡೆಸಿದರೆ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದಂತಾಗುತ್ತದೆ ಈ ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಗರ್ಭಿಣಿ ಸ್ತ್ರೀಯರು ಭಾಗವಹಿಸಿದರು ಇವರಿಗೆ ಸಂಸ್ಥೆ ವತಿಯಿಂದ ಡ್ರೈ ಫುಡ್ ಬಾಕ್ಸ್ ಕಿಟ್ ಗಳನ್ನು ನೀಡಲಾಯಿತು ಇದಲ್ಲದೆ ಬಾಲ್ಯ ವಿವಾಹದ ಬಗ್ಗೆ ಹಲವಾರು ಕಾನೂನು ಅರಿವುಗಳನ್ನು ತಿಳಿಸಿದರು ಬಾಲ್ಯ ವಿವಾಹ ಮಾಡಬಾರದು ಎಂದರು.
ಲಯನ್ ಸಂಸ್ಥೆಯ ಅಧ್ಯಕ್ಷರಾದ ಗೋಪಾಲಕೃಷ್ಣ ಮಾತನಾಡಿ ಗರ್ಭಿಣಿ ಮಹಿಳೆಯರು ಉತ್ತಮವಾದ ಪೌಷ್ಟಿಕಾಂಶ ಇರುವ ಆಹಾರ ಪದಾರ್ಥಗಳನ್ನು ತಿನ್ನಬೇಕು ಇದರಿಂದ ನಿಮ್ಮ ಆರೋಗ್ಯ ಮತ್ತು ಪುಟ್ಟ ಮಗುವಿನ ಆರೋಗ್ಯ ಕೂಡ ಬಹಳ ಮುಖ್ಯ ವಾಗಿರುತ್ತದೆ ಅದರಿಂದ ವೈದ್ಯರು ನೀಡಿರುವ ಸಲಹೆಗಳನ್ನು ಪಾಲಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಲಯನ್ ಗೋಪಾಲ್ ಪ್ರಾಂತ್ಯ ಅಧ್ಯಕ್ಷರಾದ ಲಯನ್ ರವಿಕುಮಾರ್ ನಂಜನಗೂಡು ಸಂಸ್ಥೆಯ ಕಾರ್ಯದರ್ಶಿಗಳಾದ ಲಯನ್ ನಾಗರಾಜು ಲಯನ್ ಉಮೇಶ್ ಲಯನ್ ಬಸವರಾಜು ಚಾಮುಂಡಿ ಸಂಸ್ಥೆಯ ಅಧ್ಯಕ್ಷರಾದ ಲಯನ್ ಶಿವಾಜಿ ರಾವ್ ಲಯನ್ ಲೋಕೇಶ್ ನಂಜನಗೂಡು ಸಂಸ್ಥೆಯ ಶಾಲಾ ಅಧ್ಯಕ್ಷರಾದ ಲಯನ್ ಮಂಜುನಾಥ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದರು.