ಬಕ್ರೀದ್ ಹಬ್ಬದ: ಪೂರ್ವಭಾವಿ ಸಭೆ
ಸಂಜೆವಾಣಿ ವಾರ್ತೆ
ಹನೂರು ಜೂ 16 :- ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸೌಹಾರ್ದತೆಯಿಂದ ಬಕ್ರಿದ್ ಹಬ್ಬವನ್ನು ಆಚರಿಸಬೇಕು ಎಂದು ಪೆÇಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಶಶಿಕುಮಾರ್ ತಿಳಿಸಿದರು.
ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಶುಕ್ರವಾರ ಕರೆಯಲಾಗಿದ್ದ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದ ಅವರು ಜೂನ್ 17ರಂದು ಬಕ್ರಿದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು ಹಬ್ಬದ ಹಿನ್ನೆಲೆ ಈಗ್ದಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳುವಾಗ ಮುಸ್ಲಿಂ ಬಾಂಧವರು ಶಾಂತಿಯುತವಾಗಿ ನಡೆದುಕೊಳ್ಳಬೇಕು.
ಯಾವುದೇ ತೊಂದರೆ ಉಂಟಾಗದಂತೆ ಸಮುದಾಯದವರು ಸೌಹಾರ್ದತೆ ಕಾಪಾಡಿಕೊಳ್ಳುವ ಮೂಲಕ ಹಬ್ಬವನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಜೆಸ್ಸಿಂಪಾಷಾ, ಮಸೀದಿ ಯಜಮಾನರಾದ ಇಸ್ಮೇಲ್, ಕಾರ್ಯದರ್ಶಿ ಸಮಿಉಲ್ಲಾ, ಸಬ್ಬಿರ್ ಅಹಮ್ಮದ್, ಮೊಖಬುಲ್ ಸಾಬ್, ರಾಮತುಲ್ಲಾ, ಅಪೆÇ್ರೀಜ್ ಖಾನ್, ಮುನ್ನ, ಕೌಸರ್ ಸೇರಿದಂತೆ ಇನ್ನಿತರರು ಹಾಜರಿದ್ದರು.