ಮುಸ್ಲಿಂ ಬಾಂಧವರಿಗೆ ಬಕ್ರೀದ್ ಫುಡ್ ಕಿಟ್ ವಿತರಣೆ
ಸಂಜೆವಾಣಿ ವಾರ್ತೆ
ಕೊಳ್ಳೇಗಾಲ ಜೂ 16 :- ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ, ಹೆಚ್.ಕೆ.ಟ್ರಸ್ಟ್ ಹಾಗೂ ರೋಟರಿ ಮಿಡ್ ಟೌನ್ ಸಹಯೋಗದೊಂದಿಗೆ ಕೊಳ್ಳೇಗಾಲ ರೋಟರಿ ಭವನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಟ್ರಸ್ಟ್ ನ ವತಿಯಿಂದ ಬಕ್ರೀದ್ ಕಿಟ್ ವಿತರಣೆ ಮಾಡಲಾಯಿತು.
ಶಾಸಕ ಎಆರ್ ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಬಕ್ರಿದ್ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುಮಾರು 250 ಮುಸ್ಲಿಂ ಬಾಂಧವರಿಗೆ ಬಕ್ರಿದ್ ಫುಡ್ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹೆಚ್.ಕೆ ಟ್ರಸ್ಟ್ ನ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ರೋಟರಿ ಅಧ್ಯಕ್ಷ ದಕ್ಷಿಣಮೂರ್ತಿ, ಬೆಂಗಳೂರು ಡಿವೈಎಸ್ಪಿ ಮಹಾನಂದ್ , ಎಂಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಹರ್ಷ, ಬ್ಲಾಕ್ ಅಧ್ಯಕ್ಷ ತೋಟೇಶ್, ಮುಸ್ಲಿಂ ಬಾಂಧವರು ಹಾಗೂ ಇತರರು ಹಾಜರಿದ್ದರು.