ಪರಿಸರ ರಕ್ಷಣೆ ಉದ್ದೇಶದಿಂದ ಸ್ವಚ್ಛತೆಯೇ ಸೇವೆ ಅಭಿಯಾನ ಜಾರಿ : ಇಓ ಕಿರಣ ಪಾಟೀಲ್
ಬೀದರ:ಸೆ.25:ಸ್ವಚ್ಛತೆ ಮತ್ತು ಪರಿಸರ ರಕ್ಷಣೆಯ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಸ್ವಚ್ಛತೆಯೇ ಸೇವೆ ಎನ್ನುವ ಅಭಿಯಾನವನ್ನು ಜಾರಿಗೆ ತರಲಾಗಿದೆ ಎಂದು ಬೀದರ ತಾಲ್ಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಹೇಳಿದರು.
ಅವರು ಮಂಗಳವಾರ ಚಿಲ್ಲರಗಿ ಗ್ರಾಮ ಪಂಚಾಯತನಲ್ಲಿ ಆಯೋಜಿಸಿದ ಸ್ವಚ್ಛತಯೇ ಸೇವೆ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಹೆಚ್ಚಿನ ಜನರು ಈ ಅಭಿಯಾನ ದಲ್ಲಿ ಪಾಲ್ಗೊಳ್ಳಬೇಕು. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮುಂದಿನ ದಿನಗಳಲ್ಲಿ ನಾವೆಲ್ಲಾ ಸೇರಿ ಪರಿಸರ ರಕ್ಷಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಳಿಗಳಾದ ಪೂಜಾ ಶ್ರೀ, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.