ಬೆಳೆ ಕಟಾವು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೧೬; ಬೆಳೆ ಕಟಾವು ಪ್ರಯೋಗ ಆಧರಿಸಿ, ಬೆಳೆ ವಿಮೆ ಕಂಪನಿಗಳು ವಿಮೆ ಮೊತ್ತ ನಿರ್ಧರಿಸುತ್ತವೆ. ಸರಿಯಾದ ಸಮಯಕ್ಕೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದರ ಪರಿಣಾಮ ಜಿಲ್ಲೆಯ ರೈತರು ಸಮಸ್ಯೆ ಅನುಭವಿಸುವಂತಾಗಿದೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಜರುಗಿದ ಜಿಲ್ಲಾ ಮಟ್ಟದ 11ನೇ ಕೃಷಿ ಗಣತಿ ಹಾಗೂ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ-ಅAಶಗಳ ಮೊದಲನೇ ತ್ರೆöÊಮಾಸಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳಕಟಾವು ಯೋಜನೆ ಪಟ್ಟಿ ಬಿಡುಗಡೆಗೊಂಡ ಕೂಡಲೇ ನಮೂನೆ-1 ನ್ನು ಕೈಗೊಳ್ಳಲು ಇಲಾಖಾ ಮುಖ್ಯಸ್ಥರು ಅನುವು ಮಾಡಿಕೊಡಬೇಕು. ಕಟಾವು ಪ್ರಯೋಗದ ಸಿ.ಸಿ.ಇ ಮೊಬೈಲ್ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡು ನಮೂನೆ-1 ಕೈಗೊಳ್ಳಲು ಸೂಕ್ತ ಕ್ರಮ ವಹಿಸಬೇಕು. ಬೆಳೆ ಕಟಾವು ಪ್ರಯೋಗದಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ಮೊಬೈಲ್ ತಂತ್ರಾAಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ತುಂಬಬೇಕು. ಬೆಳೆ ಕಟಾವು ಪ್ರಯೋಗ ಮಾಡಲು ನಿಯೋಜಿಸಿದ ಅಧಿಕಾರಿ ಹಾಗೂ ನೌಕರರೇ ಖುದ್ದಾಗಿ ರೈತರ ಜಮೀನಿಗೆ ತೆರಳಿ ಪ್ರಯೋಗ ಕೈಗೊಳ್ಳಬೇಕು ಎಂದು ಸೂಚಿಸಿದರು.ಬೆಳೆ ಕಟಾವು ಪ್ರಯೋಗ ಮಾಡದೇ ಇದ್ದಲ್ಲಿ ಅಥವಾ ನಿರ್ಲಕ್ಷ್ಯದಿಂದ ತಪ್ಪಾಗಿ ಮಾಹಿತಿ ತುಂಬಿದರೆ ಕಟಾವು ಪ್ರಯೋಗ ಮಾಡಿದ ಅಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಛಾಯಾಚಿತ್ರವನ್ನು ಸೆರೆ ಹಿಡಿಯುವಾಗ ತೂಕದ ಯಂತ್ರವು ಹಾಗೂ ಉತ್ಪನ್ನವು ಕಾಣುವ ರೀತಿಯಲ್ಲಿ ಇರಬೇಕು. ಇಲ್ಲವಾದರೆ ಕಟಾವು ಪ್ರಯೋಗ ಅನೂರ್ಜಿತವಾಗಲಿದೆ. ಛಾಯಾಚಿತ್ರವನ್ನು ಸೆರೆ ಹಿಡಿಯುವಾಗ ತೂಕದ ಯಂತ್ರವು ಹಾಗೂ ಉತ್ಪನ್ನವು ಕಾಣುವ ರೀತಿಯಲ್ಲಿ ಇರಬೇಕು. ಬಂದಿರುವAತಹ ತೂಕವನ್ನು ಸ್ಪಷ್ಟವಾಗಿ ಗೋಚರವಾಗುವ ರೀತಿಯಲ್ಲಿ ಫೋಟೊದಲ್ಲಿ ಸೆರೆ ಹಿಡಿಯಬೇಕು. ಉತ್ಪನ್ನ ಹಾಗೂ ಉಪ ಉತ್ಪನ್ನಗಳನ್ನು ನಿರ್ದಿಷ್ಟ ಕಾಲಂಗಳಲ್ಲಿಯೇ ತುಂಬಬೇಕು. ತೂಕದ ಯಂತ್ರದಲ್ಲಿರುವ ಹೋಲ್ಡ್ ಬಟನ್ ಪ್ರೆಸ್ ಮಾಡಿ ತೂಕವು ಸ್ಥಿರವಾದ ನಂತರವೇ ಫೋಟೋ ತೆಗೆಯಬೇಕು. ಬೆಳೆ ಕಟಾವು ನಿಯಮಾನುಸಾರ ಮಾಡದೇ, ರೈತರಿಗೆ ಬೆಳೆ ವಿಮೆಯ ಮೊತ್ತ ದೊರಕದೇ ಹೋದಲ್ಲಿ ಅಥವಾ ಕಡಿಮೆ ಮೊತ್ತ ದೊರೆತರೆ, ಕಟಾವು ಪ್ರಯೋಗ ಕೈಗೊಂಡ ಅಧಿಕಾರಿ ವೇತನದಲ್ಲಿ ಮೊತ್ತ ಕಟಾವುಗೊಳಿಸಿ, ರೈತರಿಗೆ ನಷ್ಟ ಪರಿಹಾರ ತುಂಬಿಕೊಡಲಾಗುವುದು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.