ರಾಜ್ಯದ ಅರಣ್ಯ ಸಚಿವರ ಪ್ರವಾಸ
ಕಲಬುರಗಿ:ಜೂ.15:ರಾಜ್ಯದ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜೂನ್ 16 ರಂದು ಭಾನುವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಿರುವ ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ವಸತಿ ನಿಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ಬೀದರ ಜಿಲ್ಲೆಯ ಭಾಲ್ಕಿಗೆ ಪ್ರಯಾಣಿಸುವರು.