ಯುವಕರು ಸಮಾಜಮುಖಿಯಾಗಿ ಬೆಳೆಯಬೇಕು:ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್
ಕಲಬುರಗಿ:ಜೂ.15: ಇಂದಿನ ಯುವ ಜನತೆ ಸಮಾಜದಲ್ಲಿ ಮುಂದೆ ಬಂದು ಸಮಾಜ ಮುಖಿಯಾಗಿ ಬೆಳೆಯಬೇಕು ಸ್ವಯಂ ಪ್ರೇರಣೆಯಿಂದ ಜಾಗೃತಿಗೊಳಿಸಲು ರೆಡ್ ಕ್ರಾಸ್ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು.
ಶುಕ್ರವಾರದಂದು ನಗರದ ಆಲ್ ಬದರ್ ಗ್ರಾಮೀಣ ಭಾರತೀಯ ರೆಡ್ಕ್ರಾಸ್ ಸೊಸೈಟಿ, ಜಿಲ್ಲಾ ಕಲಬುರಗಿ ಶಾಖೆ, ಆಲ್ ಬದರ್ ಗ್ರಾಮೀಣ ದಂತ ಕಾಲೇಜು ಮತ್ತು ಆಸ್ಪತ್ರೆ ಕಲಬುರಗಿ ಸಂಯುಕ್ತಾಶ್ರಯದಲ್ಲಿ ವಿಶ್ವರಕ್ತದಾನಿಗಳ ದಿನ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವ ಜನತೆ ರಕ್ತದಾನ ಮಾಡಲು ಮುಂದೆ ಬಂದರೆ ಅದೊಂದು ಬಹುದೊಡ್ಡ ಸಾಮಾಜಿಕ ಕಾರ್ಯವಾಗಲಿದೆ ಯುವ ಜನತೆ ರಕ್ತದಾನ ಮಾಡಲು ಮುಂದೆ ಬರಬೇಕು ಯುವಕ ಯುವತಿಯರು ಹುಮ್ಮಸದಿಂದ ಕೆಲಸ ನಿರ್ವಹಿಸಿದ್ದಾಗ ಮಾತ್ರ ನಮ್ಮ ದೇಶ ಅಭಿವೃದ್ಧಿಯಾಗಲು ಸಾಧ್ಯವೆಂದು ಅವರು ಸಲಹೆ ನೀಡಿದರು.
ಯುವ ಜನತೆ ಮೇಲೆ ಸಾಕಷ್ಟು ಹೊಣೆಗಾರಿಕೆ ಇದೆ ಅದನ್ನು ಅರಿತುಕೊಂಡು ಮುನ್ನಡೆಯಬೇಕು ರೆಡ್ ಕ್ರಾಸ್ ಸಂಸ್ಥೆ ರಕ್ತದಾನ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಬರುತ್ತಿರುವುದು ಶ್ಲಾಘನೀಯವೆಂದರು.