ಕಾರ್ಯಾಚರಣೆ ನಡೆಸಿ ಐದು ಮಕ್ಕಳ ರಕ್ಷಣೆ
ಕಲಬುರಗಿ:ಜೂ.15:ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098/112, ಡಾನ್ ಬಾಸ್ಕೋ ಸಂಸ್ಥೆ ಹಾಗೂ ಮಾರ್ಗದರ್ಶಿ ಸಂಸ್ಥೆ ಹಾಗೂ ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ ಇವುಗಳ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿ ಕಲಬುರಗಿ ನಗರದ ಗಂಜ್ ಏರಿಯಾ, ಮುಸ್ತಾಫಾ ಮಸೀದಿ ದರ್ಗಾ ರಸ್ತೆ, ಸ್ಟೇಷನ ಬಜಾರ, ಸುಪರ ಮಾರ್ಕೇಟ್, ಕೇಂದ್ರ ಬಸ್‍ನಿಲ್ದಾಣ ಹಾಗೂ ಕಾಕಡೆ ಚೌಕ್‍ಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಚರಣೆ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ಜೂನ್ 13 ಹಾಗೂ 14 ರಂದು ಕಾರ್ಯಾಚರಣೆ ನಡೆಸಿ ಒಟ್ಟು 5 ಮಕ್ಕಳನ್ನು ರಕ್ಷಿಸಿ, ಪುನರ್ ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲು ಬಾಲಕರ ಬಾಲಮಂದಿರದಲ್ಲಿ ದಾಖಲಿಸಲಾಗಿದೆ.
ಬೆಂಗಳೂರಿನ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿಯ ಅಧ್ಯಕ್ಷರು ಆದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸದಲ್ಲಿ ತೊಡಗಿರುವ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ ಅವರಿಗೆ ಪುನರ್ವಸತಿ ಕಲ್ಪಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ “Pಂಓ-IಓಆIಂ ಖesಛಿue ಚಿಟಿಜ ಖehಚಿbiಟiಣಚಿಣioಟಿ ಅಚಿmಠಿಚಿigಟಿ” ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ಜಾಗೃತಿ ಅಭಿಯಾನವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಅನ್ವಯ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ರಿಂದ 50,000 ರೂ.ಗಳÀ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಭಾರತದ ಸವೋಚ್ಛ ನ್ಯಾಯಾಲಯದ ರೀಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜಿಸಿರುವ ಪ್ರತಿ ಮಗುವಿಗೆ 20,000 ರೂ. ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು. ಈ ಮಕ್ಕಳ ದಾಖಲಾತಿಗಳನ್ನು ಸಂಗ್ರಹಿಸಿ ಕಾನೂನು ಕ್ರಮ ಕೈಗೋಳ್ಳಲಾಗುತ್ತದೆ.
ಈ ಕಾರ್ಯಾಚರಣೆ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕರಾದ ರವಿಂದ್ರಕುಮಾರ, ಕವಿತಾ, ಕೆ.ಎಸ್. ಪ್ರಸನ್ನ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ ಯೋಜನಾ ನಿರ್ದೇಶಕರಾದ ಸಂತೋಷ ಕುಲಕರ್ಣಿ, ಸ್ಟೇಷನ ಬಜಾರ ಹಾಗೂ ಬ್ರಹ್ಮಪೂರ ಪೊಲೀಸ್ ಠಾಣೆಯ ಪೊಲೀಸ್‍ರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಪ್ತಸಮಾಲೋಚಕಿ ಸುಮಂಗಲಾ, ಮಕ್ಕಳ ಸಹಾಯವಾಣಿ-1098/112 ಕಾರ್ಯಕ್ರಮ ಸಂಯೋಜಕ ಬಸವರಾಜ ತೆಂಗಳಿ ಹಾಗೂ ಆಪ್ತ ಸಮಾಲೋಚಕರಾದ ಮಲ್ಲಯ್ಯ ಗುತ್ತೆದಾರ್, ಡಾನ್ ಬಾಸ್ಕೋ ಸಂಸ್ಥೆಯ ಪೀರಪ್ಪ ಹಾಗೂ ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ ಮತ್ತು ಸಿಬ್ಬಂದಿ ಪ್ರಿಯಾಂಕ್ ಹಾಗೂ ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠ್ಠÀಲ್ ಚಿಕಣಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಶಿವಕುಮಾರ ರೇಷ್ಮಿ ಉಪಸ್ಥಿತರಿದ್ದರು.