ರಾಜ್ಯದ ಸಣ್ಣ ಕೈಗಾರಿಕೆ ಸಚಿವರ ಪ್ರವಾಸ
ಕಲಬುರಗಿ:ಜೂ.15:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಇವರು ಇದೇ ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ನಿರ್ಮಾಣ ಮಾಡಲಾಗಿರುವ ವಿದ್ಯಾರ್ಥಿಗಳ ವಸತಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಕೆಂಭಾವಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜೂನ್ 18 ರಂದು ಬೆಳಿಗ್ಗೆ 10 ಗಂಟೆಗೆ ಶಹಾಪೂರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮರಳಿ ಕಲಬುರಗಿಗೆ ಆಗಮಿಸುವರು. ನಂತರ ಅಂದು ಸಂಜೆ 7.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.