ಸ್ವಾದಿ ಮೇಲೆ ಹಲ್ಲೆಗೆ ಯತ್ನ: ನರಿಬೋಳ ಖಂಡನೆ
ಕಲಬುರಗಿ,ಜೂ.15-ಇತ್ತೀಚೆಗೆ ನಗರದ ಆಳಂದ ಚೆಕ್‍ಪೋಸ್ಟ್ ಹತ್ತಿರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಹೋದ ಹಿಂದೂ ಜಾಗೃತಿ ಸೇನೆ ಜಿಲ್ಲಾ ಅಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ ಮೇಲೆ ಕೆಲವರು ಹಲ್ಲೆ ನಡೆಸಲು ಯತ್ನಿಸಿರುವುದನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಗೌರವಾಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಖಂಡಿಸಿದ್ದಾರೆ.
ಹಿಂದೂ ಕಾರ್ಯಕರ್ತರವನ್ನು ಗುರಿ ಮಾಡಿ ಹಲ್ಲೆ ಮಾಡಲು ಯತ್ನಿಸಿರುವುದು ಖಂಡನೀಯ. ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ನಿಗಾ ವಹಿಸಬೇಕು ಮತ್ತು ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.