ಕಂಪ್ಯೂಟರ್ ಆಪರೇಟರ್ ವಿರುದ್ಧ ದೂರು
ಔರಾದ್ :ಜೂ.15: ಹಣ ಚೆಲ್ಲಿದರೆ ತಾಲೂಕು ಪಂಚಾಯತ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕ್ಷಣದಲ್ಲಿಯೇ ಕೆಲಸ ಮಾಡಿಕೊಡುತ್ತಾರೆ ಇಲ್ಲವಾದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಈಚೇಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಅವರಿಗೆ ಸಲ್ಲಿಸಿದ್ದಾರೆ.
ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್ ಯಶವಂತ ಎನ್ನುವವರು ಸಾರ್ವಜನಿಕರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ. ಹಣ ನೀಡಿದರೇ ಮಾತ್ರ ಕೆಲಸ ಮಾಡಿಕೊಡುತ್ತಾರೆ. ಇಲ್ಲವಾದಲ್ಲಿ ಜನರು ಕಚೇರಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.
ಈ ಬಗ್ಗೆ ತಾಪಂ ಇಒ ಅವರಿಗೆ ತಿಳಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಕುಡಲೇ ಕಂಪ್ಯೂಟರ್ ಆಪರೇಟರ್ ಯಶ್ವಂತ ಮೇಲೆ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಕಚೇರಿಯ ಎದುರು ಹೋರಾಟ ನಡೆಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸತೀಶ ವಗ್ಗೆ, ತಾಲೂಕು ಸಂಚಾಲಕ ಸುಭಾಷ ಲಾದಾ, ಗಣಪತಿ ವಾಸುದೇವ, ಯಶೆಪ್ಪ ಥಪ್ಪ, ಶಂಕರ ಮುಸ್ತಾಪೂರ, ಘಾಳೆಪ್ಪ ಶೆಂಬೆಳ್ಳಿ ಎಚ್ಚರಿಕೆ ನೀಡಿದ್ದಾರೆ.