ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ
ಅಫಜಲಪುರ: ಜೂ.15:ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಸರಳವಾಗಿ ಸಂಭ್ರಮದಿಂದ ಆಚರಿಸೋಣ ಎಂದು ಸಿಪಿಐ ಚನ್ನಯ್ಯ ಹಿರೇಮಠ್ ತಿಳಿಸಿದರು.
ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಮುಸ್ಲಿಂ ಹಾಗೂ ವಿವಿಧ ಸಮಾಜದ ಮುಖಂಡರಿಂದ ಕರೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲು ನಮ್ಮ ಇಲಾಖೆಯಿಂದ ಸೂಕ್ತ ಭದ್ರತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಭದ್ರತೆಯ ಅವಶ್ಯಕತೆ ಇದ್ದಲ್ಲಿ ನಮ್ಮ ಗಮನಕ್ಕೆ ತನ್ನಿ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದರು.
ಬಳಿಕ ಮುಸ್ಲಿಂ ಸಮಾಜದ ಮುಖಂಡರಾದ ಮಕ್ಬೂಲ್ ಪಟೇಲ್, ಮಂಜೂರ್ ಪಟೇಲ್, ಮಂಜೂರ್ ಅಹ್ಮದ್ ಅಗರಖೇಡ, ಚಿಂಟು ಪಟೇಲ್ ಅವರು ಮಾತನಾಡಿ ನಮ್ಮಲ್ಲಿ ಭಾವೈಕ್ಯತೆಯ ಮತ್ತು ಸೌಹಾರ್ದತೆಯ ವಾತಾವರಣ ಇದ್ದು ಇಸ್ಲಾಂ ಧರ್ಮದ ಪದ್ಧತಿಯಂತೆ ಬಕ್ರೀದ್ ಹಬ್ಬವನ್ನು ಸರಳವಾಗಿ ಹಾಗೂ ವಿವಿಧ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಹೀಗಾಗಿ ನಮ್ಮಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗುವುದಿಲ್ಲ ಎಂದು ಭರವಸೆ ನೀಡಿದರು.
ಶಾಂತಿ ಸಭೆ ಉದ್ದೇಶಿಸಿ ಮುಖಂಡರಾದ ಚಂದು ದೇಸಾಯಿ, ಶಂಕರ ಮ್ಯಾಕೇರಿ ಅನೇಕರು ಮಾತನಾಡಿದರು.
ಸಭೆಯಲ್ಲಿ ಶಿವಪುತ್ರಪ್ಪ ಸಂಗೋಳಗಿ, ಮಲ್ಲು ಕಿಣಗಿ, ಸೈಫನಸಾಬ್ ಹಿತ್ತಲ್ ಶಿರೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.