ರಾಜಗೋಪಾಲ ರೆಡ್ಡಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲು ಮನವಿ
ಕಲಬುರಗಿ:ಜೂ.15: ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿರುವ ಜಗದೇವ ಗುತ್ತೇದಾರ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರಿಂದ ಖಾಲಿಯಾಗಿರುವ ಅಧ್ಯಕ್ಷ ಸ್ಥಾನಕ್ಕೆ ಉದ್ಯಮಿದಾರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ರಾಜಗೋಪಾಲ ರೆಡ್ಡಿ ಮುದಿರಾಜ ಅವರನ್ನು ನೇಮಕ ಮಾಡಬೇಕೆಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ತತ್ವ ಸಿದ್ದಾಂತ,ಪಕ್ಷನಿಷ್ಠೆಯಿಂದ ಪಕ್ಷದ ಸಂಘಟನೆಯಲ್ಲಿ ಸಕ್ರೀಯರಾಗಿರುವ ಮುಖಂಡ ರಾಜಗೋಪಾಲ ರೆಡ್ಡಿ ಮುದಿರಾಜ ಅವರನ್ನು ಗುರುತಿಸಿ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.