ರಾಷ್ಟ್ರೋತ್ತಾನ ವಿದ್ಯಾಕೇಂದ್ರದ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ
ಕಲಬುರಗಿ,ಜೂ.15:ಕಲಬುರಗಿ ತಾಲೂಕಿನ ಶರಣಶಿರಸಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೋತ್ತಾನ ವಿದ್ಯಾಕೇಂದ್ರದ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಲಬುರಗಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಅವರು ಶುಕ್ರವಾರ ಸಸಿ ನೆಡುವÀದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಸೈಯದ ಪಟೇಲ್, ಸಹಾಯಕ ನಿರ್ದೇಶಕ (ಪಂ.ರಾ.) ವಿಶ್ವನಾಥ ಎಮ್.ವೈ, ವಲಯ ಅರಣ್ಯಾಧಿಕಾರಿ ಮೌಲಾಲಿ, ಶರಣಶಿರಸಗಿ ಗ್ರಾಮ ಪಂಚಾಯತ್‍ನ ಪಂಚಾಯತ ಅಭಿವೃದ್ದಿ ಅಧಿಕಾರಿ ಅಮರ್ ಏಕಲೂರೆ, ಗ್ರಾಮ ಪಂಚಾಯತ ಅಧ್ಯಕ್ಷ ಅನೀಲ ಭರಣಿ, ನರೇಗಾ ಐ.ಇ.ಸಿ. ಮೋಸಿನ್ ಖಾನ್, ಶರಣಶಿರಸಗಿ, ರಾμÉ್ಟ್ರೂೀತ್ಥಾನ ವಿದ್ಯಾ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯರು, ಗ್ರಾಮದ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಜನರು ಉಪಸ್ಥಿತರಿದ್ದರು. ಈ ವನಮೋತ್ಸವ ಸಸಿ ನೆಡುವ ಕಾರ್ಯಕ್ರಮದ ಅಂಗವಾಗಿ 200 ಸಸಿಗಳನ್ನು ನೆಡಲಾಯಿತು.