ಡೆಂಗ್ಯೂ ದಿನದ ಕುರಿತು ಕಾರ್ಯಾಗಾರ
ಧಾರವಾಡ,ಜೂ15: ಧಾರವಾಡ ತಾಲೂಕಾ ಪಂಚಾಯತ ಸಭಾಭವನದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನದ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೀಟಶಾಸ್ತ್ರಜ್ಞ ಮಂಜುನಾಥ.ಟಿ.ಪಿ, ಅವರು ಡೇಂಗ್ಯೂ ರೋಗವು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ಜೀವನಚಕ್ರ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳಿಂದ ಡೇಂಗ್ಯೂ ರೋಗ ಹರಡುವುದನ್ನು ತಪ್ಪಿಸಲು ಸಾಧ್ಯ ಎಂಬ ವಿಷಯದ ಬಗ್ಗೆ ಮಂಡಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುಭಾಷ್ ಸಂಪಗಾವ, ಕಾಲರಾ ನಿಯಂತ್ರಣಾಧಿಕಾರಿ ಡಾ.ಸವಿತಾ ನಾಡಗೌಡ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ. ಕೆ.ಎನ್., ಆರೋಗ್ಯ ಮೇಲ್ವಿಚಾರಣಾಧಿಕಾರಿ ಕೆ.ಆಯ್.ಶ್ಯಾವಿ, ತಾಲೂಕಾ ಪಂಚಾಯತ ಅಧಿಕಾರಿ ಚಂದ್ರು ಪೂಜಾರಿ, ಗಿರೀಶ ಕೋರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವಣ್ಯಪ್ಪ ಹೂಗಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು, ಧಾರವಾಡ ತಾಲೂಕಿನ ಗ್ರಾಮಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಫೋಮಿಂಗ ಮಷಿನ್ ಉಪಯೋಗಿಸುವ ಬಗ್ಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಯಿತು.