ಕೆ.ಕೆ.ಆರ್.ಡಿ.ಬಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳ ಹೈಲೈಟ್ಸ್..
ಬಳ್ಳಾರಿ, ಜೂ.15: ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಲು ಸೂಚಿಸೊದರು
ಕಲ್ಯಾಣ ಕರ್ನಾಟಕ ಭಾಗದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು*
ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು
ಹಾಸ್ಟೆಲುಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು
ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು*
ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡುವಂತೆ ಸೂಚಿಸಿದರು
ಸಿ.ಎಸ್.ಆರ್. ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸೂಚಿಸಿದರು
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು