ಪ್ರವಾಹದ ಬಗ್ಗೆ ಜಾಗೃತಿ ಮೂಡಿಸಿ
ಧಾರವಾಡ,ಜೂ15: ಜಿಲ್ಲೆಯ ಎರಡು ಪ್ರಮುಖ ಹಳ್ಳಗಳಾದ ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಹರಿಯುವ ಮಾರ್ಗದ ಗ್ರಾಮಗಳಲ್ಲಿ ಪ್ರವಾಹದ ಕುರಿತು ಜಾಗೃತಿ ಮೂಡಿಸಬೇಕು ಮತ್ತು ಪ್ರವಾಹ ಉಂಟಾದಲ್ಲಿ ಜನ, ಜಾನುವಾರು ರಕ್ಷಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಪಶುಪಾಲನೆ, ಅಗ್ನಿಶಾಮಕ, ಆರೋಗ್ಯ, ಮಹಾನಗರ ಪಾಲಿಕೆ, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.