ಸಿಎಂ ವಿರುದ್ಧ ಷಡ್ಯಂತ್ರ ಖಂಡಿಸಿ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ನಡೆಯುತ್ತಿರುವ ಷಡ್ಯಂತರ ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು, ಸೆ. ೨೫- ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ವಿರೋಧಿಗಳ ಷಡ್ಯಂತ್ರ ವಿರೋಧಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮೌನ ಪ್ರತಿಭಟನೆ ನಡೆಸಿತು.ನಗರದ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನ ವಿರೋಧಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕಳೆದ ೪೦ವರ್ಷಗಳಿಂದ ಸಾರ್ವಜನಿಕರ ಸೇವೆಯಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಸಾರ್ವಜನಿಕರ ಸೇವೆ ಮಾಡುತ್ತಿದ್ದಾರೆ.ಬಿಜೆಪಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳು ಮುಡಾ ಪ್ರಕರಣದಲ್ಲಿ ಏನು ಪಾತ್ರವಿಲ್ಲದ ಸಿದ್ದರಾಮಯ್ಯರವರ ವಿರುದ್ಧ ಅರೋಪ ಮಾಡಿ, ಕಾಂಗ್ರೆಸ್ ಸರ್ಕಾರ ಉರುಳಿಸುವ ತಂತ್ರ ಮಾಡುತ್ತಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪರ ನಾಡಿನ ಜನರು ನಿಂತಿದ್ದಾರೆ ಎಂದರು.
ಅಧ್ಯಕ್ಷರಾದ ಎಂ.ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್, ಮಾಜಿ ಮಹಾಪೌರರಾದ ವೆಂಕಟೇಶಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ರಾಮಕೃಷ್ಣ, ಆಡಳಿತ ಪಕ್ಷದ ಮಾಜಿ ನಾಯಕರಾದ ಎಮ್.ಶಿವರಾಜು ದಲಿತ ಪರ ಹೋರಾಟಗಾರರು, ಪ್ರಗತಿ ಪರ ಚಿಂತಕರು, ಶೋಷಿತ ಸಮುದಾಯದ ಮುಖಂಡರುಗಳು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.