ಆರ್ ಎಲ್ ಕಾನೂನು ಕಾಲೇಜಲ್ಲಿ ರಕ್ತದಾನ ಶಿಬಿರ

ಸಂಜೆವಾಣಿ ವಾರ್ತೆ
ದಾವಣಗೆರೆ: ನಗರದ ಆರ್ ಎಲ್ ಕಾನೂನು ಕಾಲೇಜಿನ ಆವರಣದಲ್ಲಿ ಶುಕ್ರವಾರ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರದಲ್ಲಿ 31 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜೆಜೆಎಂ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಕ್ಲ ಶೆಟ್ಟಿ, ದೇವೇಂದ್ರಪ್ಪ, ನಿಕೇತನ್ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಆರ್ ಎಲ್ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ಎಸ್ ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾಗಿ ಹೆಚ್.ಆರ್. ಪವನ್  ಮತ್ತು ಬಿ.ಎಂ. ದಿಲೀಪ್ ಕುಮಾರ್ ಉಪಸ್ಥಿತರಿದ್ದರು.