ಕಿಡ್ನಿ ಉಚಿತ ತಪಾಸಣೆ ಶೀಘ್ರದಲ್ಲೇ ಆರಂಭ
ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.೧೫; ನಗರದ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಉಚಿತ ಕಿಡ್ನಿ ತಪಾಸಣೆ ಆರಂಭಿಸಲಾಗುವುದು ಎಂದು ಟ್ರಸ್ಟ್ನ ಲೈಫ್ ಟ್ರಸ್ಟಿö, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.ನಗರದ ಕೆ.ಆರ್. ರಸ್ತೆಯ ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ  ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಅಳವಡಿಸಿರುವ ಹೆಚ್ಚುವರಿ ನಾಲ್ಕು ಡಯಾಲಿಸಿಸ್ ಯಂತ್ರಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಇತ್ತೀಚಿನ ಜೀವನ ಶೈಲಿಯಿಂದ ಮಧುಮೇಹ, ರಕ್ತದೊತ್ತಡ, ಬೊಜ್ಜುತನ ಸೇರಿದಂತೆ ನಾನಾ ಕಾರಣಗಳಿಂದ ಸಾರ್ವಜನಿಕರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತಪಾಸಣೆ ನಡೆಸಿ ಮೊದಲ ಹಂತದಲ್ಲಿ ಕಿಡ್ನಿ ಸಮಸ್ಯೆಯನ್ನು ಪತ್ತೆ ಹಚ್ಚಿದರೆ, ಮೂರನೇ ಹಂತಕ್ಕೆ ಹೋಗುವುದನ್ನು ತಡೆದು ಅಪಾಯ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಟ್ರಸ್ಟ್ನಿಂದ ಉಚಿತ ತಪಾಸಣೆ ಸೇವೆ ಆರಂಭಿಸಲಾಗುವುದು” ಎಂದರು.ಟ್ರಸ್ಟ್ ವತಿಯಿಂದ ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಮತ್ತು ಅರಸಾಪುರ ಗ್ರಾಮಗಳನ್ನು ದತ್ತು ಪಡೆದು, ಆ ಗ್ರಾಮಗಳ ಜನರನ್ನು ತಪಾಸಣೆಗೆ ಒಳಪಡಿಸಿ, ಆರೋಗ್ಯ ಸೇವೆ ಕಲ್ಪಿಸಲಾಗುತ್ತಿದೆ. ಅದೇ ರೀತಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ” ಎಂದರು.ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, “ದಾವಣಗೆರೆ ಹಳೇ ಭಾಗದಲ್ಲಿ ಶೇ.75 ರಷ್ಟು ಜನರು ಬಡವರಿದ್ದಾರೆ. ಇವರಿಗೆ ಉಪಯೋಗವಾಗಲಿ ಎಂಬ ಸದುದ್ದೇಶದೊಂದಿಗೆ ಯಾರಿಂದಲೂ ಒಂದು ರೂ. ಪಡೆಯದೇ ಉಚಿತ ಡಯಾಲಿಸಿಸ್ ಸೇವೆ ಆರಂಭಿಸಿ, ಜನರ ಪ್ರಾಣ ಉಳಿಸುವ ಕೆಲಸ ಮಾಡಲಾಗುತ್ತಿದೆ” ಎಂದರು.ಇಲ್ಲಿಗೆ ಬರುವ ರೋಗಿಗಳಿಗೆ ವೈದ್ಯರು ಮತ್ತು ಸಿಬ್ಬಂದಿಗಳು ನೀವು ಟ್ರಸ್ಟ್ನ ಅಧ್ಯಕ್ಷರ ಅಥವಾ ಕಾರ್ಯದರ್ಶಿ ಪತ್ರ ತೆಗೆದುಕೊಂಡು ಬನ್ನಿ ಎಂದು ಕೇಳಬೇಡಿ. ಎಷ್ಟೇ ಜನ ಬಂದರೂ ಉತ್ತಮ ಸೇವೆ ನೀಡಬೇಕು” ಎಂದು ಸೂಚನೆ ನೀಡಿದರು.ಬಾಪೂಜಿ ಆಸ್ಪತ್ರೆ ಅÃಕ್ಷಕ ಡಾ.ಟಿ.ಎಸ್. ಕುಮಾರ್ ಪ್ರಾಸ್ತಾವಿಕ ಮಾತನಾಡಿ, “ಟ್ರಸ್ಟ್ನಿಂದ ಗರ್ಭಿಣಿಯರ ತಪಾಸಣೆ, ಹೆರಿಗೆ, ಕ್ಯಾನ್ಸರ್ ತಪಾಸಣೆ, ನೇತ್ರ ಮತ್ತು ದಂತ ಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಗುತ್ತಿದೆ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲೆ ಡಾ.ಶುಕ್ಲಾ ಶೆಟ್ಟಿö, ಬಾಪೂಜಿ ಆಸ್ಪತ್ರೆ ಆಡಳಿತಾಕಾರಿ ಸತ್ಯನಾರಾಯಣ, ಬಾಪೂಜಿ ವಿದ್ಯಾಸಂಸ್ಥೆ ಸದಸ್ಯೆ ಕಿರುವಾಡಿ ಗಿರಿಜಮ್ಮö, ಸಂಪನ್ನ ಮುತಾಲಿಕ್, ನಿರಂಜನ್ ಮತ್ತಿತರರಿದ್ದರು.