ಅಡುಗೆ ಕಾರ್ಮಿಕರ ಪ್ರತ್ಯೇಕ ಕಲ್ಯಾಣ ಮಂಡಳಿ ರಚನೆಗೆ  ಎಲ್.ಹೆಚ್. ಅರುಣ್‌ಕುಮಾರ್ ಒತ್ತಾಯ
ದಾವಣಗೆರೆ, ಜೂ.೧೪- ಕರ್ನಾಟಕ ರಾಜ್ಯ ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರು ಅಸಂಘಟಿತ ಕಾರ್ಮಿಕರ ಸಂಘದಿAದ “ಅಡುಗೆ ಕಾರ್ಮಿಕರ ನ್ಯಾಯಯುತ ಬೇಡಿಕೆಗಳು” ಕುರಿತು ವಿಚಾರ ಸಂಕಿರಣವನ್ನು ರೋಟರಿ ಬಾಲಭವನದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯP್ಷÀರಾದ ಎಲ್.ಹೆಚ್. ಅರುಣ್‌ಕುಮಾರ್ ಅವರು, ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕು ಸುಮಾರು 76 ವರ್ಷಗಳು ಕಳೆದರೂ ಅಡುಗೆ ವೃತ್ತಿಯಿಂದ ಜೀವನ ನಡೆಸುತ್ತಿರುವ ಅಡುಗೆ ಕಾರ್ಮಿಕರ ಬದುಕು ಶೋಚನೀಯವಾಗಿದೆ. ಇತರೆ ಅಸಂಘಟಿತ ವಲಯದ ಕಾರ್ಮಿಕರಂತೆ ಅಡುಗೆ ಕಾರ್ಮಿಕರನ್ನೂ ಅಸಂಘಟಿತ ವಲಯದ ಕಾರ್ಮಿಕರ ಪಟ್ಟಿಗೆ ಸೇರಿಸದೇ ಇರುವುದು ದುರದೃಷ್ಟಕರ. ಈ ನಿಟ್ಟಿನಲ್ಲಿ ಅಡುಗೆ ಕೆಲಸ ಮಾಡುವವರು ಒಗ್ಗಟ್ಟಾಗಿ ಸಂಘಟನೆಯ ಮೂಲಕ ತಮ್ಮ ನ್ಯಾಯಯುತ ಹಕ್ಕುಗಳನ್ನು ಪಡೆದುಕೊಳ್ಳಬೇಕೆಂದು ಪ್ರತಿಪಾದಿಸಿದರು. ಅಡುಗೆ ಕಾರ್ಮಿಕರ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸಿ ಆ ಮಂಡಳಿಯಲ್ಲಿ ಸಂಘಟನೆಯ ಸದಸ್ಯರು ಪ್ರತಿನಿಧಿಗಳಾಗುವಂತೆ ನೋಡಿಕೊಳ್ಳಬೇಕು, ಅತ್ಯಂತ ಪವಿತ್ರ ವೃತ್ತಿಯಾದ ಅಸಂಖ್ಯಾತ ಜನರಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಹಸಿವನ್ನು ನೀಗಿಸುವ ಅಡುಗೆ ಕೆಲಸದವರು ಸಂಕಷ್ಟಗಳನ್ನು ಎದುರಿಸುತ್ತಿರುವುದು ವಿಷಾದನೀಯವೆಂದರು. ಇಂತಹ ಕಾರ್ಮಿಕರ ವಿದ್ಯಾಭ್ಯಾಸ, ಆಸ್ಪತ್ರೆಯ ಚಿಕಿತ್ಸಾ ವೆಚ್ಚ, ಅಪಘಾತ ಪರಿಹಾರ ಮತ್ತು ಪಿಂಚಣಿ ಸೌಲಭ್ಯಗಳು ಜಾರಿಗೆ ಬರುವಂತೆ ಸಂಘಟಿತರಾಗಿ ಸರ್ಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದು ತಿಳಿಸಿದರು.