ಜೂನ್ 18 ರಂದು ಯೋಗದ ಮಹತ್ವ ಸಾರಲು ಬೃಹತ್ ಜಾಗೃತಿ ಜಾಥ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೧೪; ಜಿಲ್ಲಾಡಳಿತ, ಆಯುಷ್ ಇಲಾಖೆ ವತಿಯಿಂದ ಬರುವ ಜೂನ್ 21 ರಂದು 10ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಗೆ ಸಲಕ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಯೋಗ ದಿನಾಚರಣೆ ಯಶಸ್ಸಿಗೆ ಸರ್ಕಾರದ ಇತರೆ ಇಲಾಖೆಗಳು ಸೇರಿದಂತೆ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳು ಕೈ ಜೋಡಿಸಿವೆ.ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಯೋಗ ದಿನಾಚರಣೆ ಯಶಸ್ವಿಗೆ ಚರ್ಚಿಸಿ, ನೀಲನಕ್ಷೆ ರೂಪಿಸಲಾಯಿತು.ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜೂನ್ 21 ರಂದು ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 7.00 ಗಂಟೆಯಿAದ 7.45 ರವರೆಗೆ ಸುಮಾರು 2000 ಸಾವಿರಕ್ಕೂ ಅಧಿಕ ಯೋಗಾಸಕ್ತರು ಸಾಮೂಹಿಕ ಯೋಗಾಭ್ಯಾಸ ಮಾಡುವ ಮೂಲಕ ಅಂತರಾಷ್ಟಿçÃಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಗರ ಸಭೆಯಿಂದ ಮೈದಾನ ಸ್ವಚ್ಛಗೊಳಿಸಬೇಕು. ಜಿಲ್ಲಾ ಆಯುಷ್ ಇಲಾಖೆಯಿಂದ ಮ್ಯಾಟ್ ಹಾಸುವುದರೊಂದಿಗೆ ಮೈದಾನವನ್ನು ಯೋಗಾಭ್ಯಾಸಕ್ಕೆ ಸಜ್ಜುಗೊಳಿಸಬೇಕು. ಯೋಗದಲ್ಲಿ ಪಾಲ್ಗೊಳ್ಳುವರಿಗೆ ತೊಂದರೆಯಾಗದAತೆ ಮೈದಾನದ ಸುತ್ತಲಿನ ಸರ್ಕಾರಿ ಕಚೇರಿ ಹಾಗೂ ಶಾಲೆಗಳ ಶೌಚಾಲಯಗಳನ್ನು ತೆರದಿಡಬೇಕು. ಆಯುಷ್ ಇಲಾಖೆ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವವರಿಗೆ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಬೇಕು. ತುರ್ತು ಸಂದರ್ಭಕ್ಕಾಗಿ ಆಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ಸನ್ನದ್ದವಾಗಿ ಇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಬಾರಿಯ ಅಂತರಾಷ್ಟಿçÃಯ ಯೋಗ ದಿನಾಚರಣೆಗೆ ಪೊಲೀಸ್ ಇಲಾಖೆಯು ಕೈ ಜೋಡಿಸಿದ್ದು, ಎಲ್ಲಾ ಪೊಲೀಸ್ ಸಿಬ್ಬಂದಿ ಹಳೆ ಮಾಧ್ಯಮ ಆವರಣದಲ್ಲಿನ ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಪ್ರತಿ ಬಾರಿ ‘ಯೋಗ ದಿನಾಚರಣೆಯಂದು ಪೊಲೀಸ್ ಇಲಾಖೆಯಿಂದ ಸಶಸ್ತç ಮೀಸಲು ಪಡೆಯ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿ ಪ್ರತ್ಯೇಕವಾಗಿ ಯೋಗಭ್ಯಾಸ ಮಾಡುತ್ತಿದ್ದರು. ಇದರ ಬದಲಾಗಿ ಪೊಲೀಸ್ ಸಿಬ್ಬಂದಿ ಆಯುಷ್ ಇಲಾಖೆ ವತಿಯಿಂದ ಆಯೋಜಿಸುವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವರು’ ಎಂದು ಆಯುಷ್ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ತಿಳಿಸಿದ್ದಾರೆ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಸಭೆಯಲ್ಲಿ ಮಾಹಿತಿ ನೀಡಿದರು.