ಭಯೋತ್ಪಾದಕರನ್ನು ಹಿಡಿದು ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.14:- ಜಮ್ಮು-ಕಾಶ್ಮೀರದಲ್ಲಿ ಹಿಂದೂ ಭಕ್ತರ ಮೇಲೆ ಹಲ್ಲೆ ನಡೆಸಿದ ಭಯೋತ್ಪಾದಕರನ್ನು ಹಿಡಿದು ಕಠಿಣ ಶಿಕ್ಷೆ ವಿಧಿಸುವಂತೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿತು.
ಸಿದ್ಧಾರ್ಥನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಸಂಘಟನೆ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈಚೆಗೆ ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ಕತ್ರಾದಿಂದ ಶಿವಖೋಡಿಗೆ ಸಂಚರಿಸುತ್ತಿದ್ದ ಹಿಂದೂ ಭಕ್ತರ ಬಸ್ಸಿನ ಮೇಲೆ ಪಾಕಿಸ್ತಾನ ಪೆÇೀಷಿತ ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕ ಕೃತ ನಡೆಸಿ 10 ನಿರ್ದೋಷಿ ಹಿಂದೂ ಯಾತ್ರಿಕರು ಮರಣ ಹೊಂದಿದ್ದಾರೆ. ಸುಮಾರು ನಲವತ್ತು ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕ್ರೂರಕೃತ್ಯದಿಂದ ಸಂಪೂರ್ಣ ದೇಶ ಆಘಾತಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಮ್ಮು ಕಾಶ್ಮೀರದಲ್ಲಿ 370 ವಿಧಿ ರದ್ದುಪಡಿಸಿದ ನಂತರ ಒಂದು ಆಶಾದೀಪ ಬೆಳಗಿತ್ತು. ಆದರೆ, ಉಗ್ರರ ಅಟ್ಟಹಾಸ ಇನ್ನೂ ಕಡಿಮೆಯಾಗಿಲ್ಲ. ಹಿಂದೂಗಳನ್ನು ಗುರುತಿಸಿ ಅವರ ಹತ್ಯೆಗೀಡು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದರಲ್ಲಿ ಪಾಕಿಸ್ತಾನದ ಹಸ್ತಕ್ಷೇಪ ಸ್ಪಷ್ಟವಾಗಿದೆ. ದೇಶದ ಹೊಸ ಸರ್ಕಾರದ ಪ್ರಮಾಣವಚನದ ಸಮಯದಲ್ಲಿ ಇಂತಹ ಹೇಯ ಕೃತ್ಯ ಮಾಡಿ ಇಸ್ಲಾಮಿಕ್ ಭಯೋತ್ಪಾದಕರು ದೇಶದ ಸ್ವಾಯತ್ತತೆಗೆ ಸವಾಲನ್ನು ನೀಡಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭಯೋತ್ಪಾದಕ ಕೃತ್ಯಗಳ ಮೇಲೆ ಸಂಪೂರ್ಣ ನಿಯಂತ್ರಣ ಪಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಂತಹ ಕೃತ್ಯಗಳಿಗೆ ಸಿಲುಕಿರುವ ಹಿಂದೂಗಳಿಗೆ ರಕ್ಷಣೆ, ಕೃತ್ಯಕ್ಕೆ ಕಾರಣರಾದ ವಿದೇಶಿ ಶಕ್ತಿಗಳನ್ನು ಕಠಿಣವಾಗಿ ಶಿಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜ್ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಹೇಶ್ ಕಾಮತ್, ಉಪಾಧ್ಯಕ್ಷ ಕೆ.ಜಗದೀಶ್ ಹೆಬ್ಬಾರ್, ಜಿಲ್ಲಾ ಕಾರ್ಯದರ್ಶಿ ಮಧು ಶಂಕರ್, ವಿಭಾಗ ಮಾತೃ ಶಕ್ತಿ ಪ್ರಮುಖ್ ಸವಿತಾ ಘಾಟ್ಕೆ, ಅಂಬಿಕಾ, ಶೈಲಜಾ, ಧರ್ಮ ಪ್ರಸಾರ ಪ್ರಮುಖ್ ಮರಿಯಪ್ಪ, ಸೇವಾ ಪ್ರಮುಖ್ ಲೋಕೇಶ್, ಗೋ ರಕ್ಷ ಪ್ರಮುಖ್ ಶಿವರಾಜ್, ಜಿಲ್ಲಾ ಮಾತೃ ಶಕ್ತಿ ಸಾಹಸಯ್ಯೋಜಕಿ ಜ್ಯೋತಿ ರವಿ, ಸುಧಾ, ಚಿದಾನಂದ್, ಸುರೇಶ, ಸಚಿನ್ ನಾಯಕ್ ಹಾಜರಿದ್ದರು.