ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಶೈಕ್ಷಣಿಕ ಭಾಗೀದಾರರ ಪಾತ್ರ ಮುಖ್ಯ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೧೩: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಶಿಕ್ಷಕರು, ಪೋಷಕರು, ಅಧಿಕಾರಿಗಳು, ಸಂಘ ಸಂಸ್ಥೆಗಳು ಇತ್ಯಾದಿ ಭಾಗೀದಾರರ ಪಾತ್ರ ಮುಖ್ಯವಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು. ಡಯಟ್‌ನಲ್ಲಿ  ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸುತ್ತ ಮುತ್ತಲಿನ ಪ್ರದೇಶ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಅಂತಹ ಮಕ್ಕಳು ಮತ್ತು ಅವರ ಪೋಷಕರಿಗೆ ತಿಳುವಳಿಕೆ ನೀಡಿ ಶಿಕ್ಷಣ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಪ್ರತಿಯೊಂದು ಮಗು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವನ ನಡೆಸಲು ಶಿಕ್ಷಣ ದಾರಿದೀಪವಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದAತೆ ಮುಖ್ಯವಾಹಿನಿಗೆ ತರುವಲ್ಲಿ ಶೈಕ್ಷಣಿಕ ಭಾಗೀದಾರರು ಕಾರ್ಯ ನಿರ್ವಹಿಸಬೇಕು ಎಂದರು. ಉಪನ್ಯಾಸಕ ಎಸ್. ಬಸವರಾಜು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು.ಹಿರಿಯ ಉಪನ್ಯಾಸಕರಾದ ಎಸ್.ಜ್ಞಾನೇಶ್ವರ, ಪೂರ್ಣಿಮಾ, ಗಿರಿಜಾ, ಮಂಜುಳಾ, ಉಪನ್ಯಾಸಕರಾದ ಆರ್.ನಾಗರಾಜು, ಕೆ.ಜಿ.ಪ್ರಶಾಂತ್, ಸಿ.ಎಸ್.ಲೀಲಾವತಿ, ಕನಕಮ್ಮ, ಶಿವಲೀಲಾ, ಬಿ.ಎಸ್.ನಿತ್ಯಾನಂದ, ಬಿ.ಆರ್.ಸಿ ಸುರೇಂದ್ರನಾಥ್, ತಾಂತ್ರಿಕ ಸಹಾಯಕ ಲೋಕೇಶ್, ಕಚೇರಿ ಸಿಬ್ಬಂದಿ ಕವಿತಾ, ರೂಪಾ, ಮಂಜುನಾಥ್ ಸೌಭಾಗ್ಯಮ್ಮ, ಕ್ಷೀರಾ, ಶ್ರೀನಿವಾಸ್ ಮತ್ತಿತರರಿದ್ದರು.