ಜೂ. 21 ಕ್ಕೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ:ಜೂ.13: ಜೂನ್ 21 ರಂದು ನಡೆಯುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ, ಮಹಾವಿದ್ಯಾಲಯಗಳ ಪ್ರಾಂಶುಪಾಲರು ಮತ್ತು ವಿವಿಧ ಯೋಗ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ದಿನಾಚರಣೆ ನಡೆಸಲಾಗುವುದು.
ಜೂನ್ 21 ರಂದು ನಡೆಯುವ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಿರ್ಧರಿಸಲಾಯಿತು. ಜೂನ್ 21 ರಂದು ಬೆಳಿಗ್ಗೆ 7.00 ಗಂಟೆಗೆ ಯೋಗ ಕಾರ್ಯಕ್ರಮ ಅರಂಭವಾಗಲಿದ್ದು, 7.45 ಗಂಟೆಯವರೆಗೆ ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.
ಈ ವರ್ಷದ ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಜೂನ್ 10 ರಿಂದ 20 ರವರೆಗೆ ಪೂರ್ವಭಾವಿಯಾಗಿ “ಯೋಗೋತ್ಸವ-2024” ಕಾರ್ಯಕ್ರಮವನ್ನು ಕರ್ನಾಟಕ ವಸತಿ ಶಿಕ್ಷಣ ಶಾಲೆಗಳಲ್ಲಿ ಮತ್ತು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಆಯುಷ್ ಪರಿಚಯ ಹಾಗೂ ಯೋಗದ ಮಹತ್ವ ಮತ್ತು ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಈಗಾಗಲೇ ಹಮ್ಮಿಕೊಂಡಿರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು.
ಅಂದು ನಡೆಯುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕೆಲಸವನ್ನು ನಿರ್ವಹಿಸಬೇಕೆಂದರು. ಕಲಬುರಗಿ ಅಧೀನದಲ್ಲಿ ಬರುವ 8 ಮತ್ತು 9 ನೇ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಎಲ್ಲಾ ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಅವರಿಗೆ ಕರೆ ತರುವ ಜವಬ್ದಾರಿ ತಮ್ಮದಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಗಮಿಸುವವರಿಗೆ ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ ಯೋಗಸನ ಮಾಡಲು ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಮತ್ತು ಸ್ಪಚ್ಫತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳಬೇಕೆಂದರು.
ವಿ.ಐ.ಪಿ.ಗಳ ಸಲುವಾಗಿ ಯೋಗ ಮ್ಯಾಟ್ ಹಾಗೂ ಬ್ಯಾನರ್‍ಗಳ ಬಗ್ಗೆ ಕ್ರಮವಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ್ ಅಷ್ಟಗಿ ಅವರಿಗೆ ಸೂಚಿಸಿದರು.
ಪೋಲಿಸ್ ಇಲಾಖೆಗೆ ಸುರಕ್ಷೆ ಒದಗಿಸಲು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಮಗೆ ನೀಡಿದ ಕೆಲಸ ಕಾರ್ಯಗಳ ಬಗ್ಗೆ ಜವಬ್ದಾರಿಯಿಂದ ನಿರ್ವಹಿಸಬೇಕೆಂದರು. ಅಂದು ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹೇಳಿದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಗಿರೀಜಾ ಎಸ್.ಯು. ಅವರು ಮಾತನಾಡಿ, ಜೂನ್ 20 ರಂದು ಬೆಳಿಗ್ಗೆ 6 ಗಂಟೆಗೆಯಿಂದ ಯೋಗ ನಡೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಗತ್ ಸರ್ಕಲ್ ವೃತ್ತದಿಂದ ಪ್ರಾರಂಭವಾಗಿ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯವಾಲಿದೆ ಎಂದು ಸಭೆಯಲ್ಲಿ ತಿಳಿಸಿದರು.
ಎಲ್ಲಾ ವಸತಿ ನಿಲಯ ಮತ್ತು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಗುಂಪುಗಳಿಗೆ ಸ್ಕೌಟ್ಸ್ ಆಂಡ್ ಗೈಡ್ಸ್ ಮತ್ತು ಇನ್ನೀತರೆ ಜನರಿಗೆ ಪೂರ್ವಭಾವಿಯಾಗಿ ಯೋಗ ಪ್ರಾತ್ಯಕ್ಷೀತೆ ಮಾಡಲು ಹಾಗೂ ಜಿಲ್ಲೆಯ ವಿವಿಧ ಇಲಾಖೆ ಸಿಬ್ಬಂಧಿಗಳಿಗೂ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ದೇಶಿಸಿದರು.
ಅದೇ ರೀತಿಯಾಗಿ ಗ್ರಾಮ ಪಂಚಾಯತ್‍ಗಳ್ಲಿ ಅಂಗನವಾಡಿಗಳಲ್ಲಿ ಎಲ್ಲ ಶಾಲಾ ಕಾಲೇಜ್‍ಗಳಲ್ಲಿ ಯೋಗ ಅಭ್ಯಾಸ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ (ಅಭಿವೃದ್ದಿ) ಆರ್.ಪಿ. ಜಾಧವ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಾವೀದ ಕರಂಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಶಾಲಾ ಕಾಲೇಜಿನ ಪ್ರಾಂಶುಪಾಲಕರು ವಿವಿಧ ಸಂಘ ಸಂಸ್ಥೆಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.