ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ರಚಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ದಸ್ತಿ ತಾಕೀತು
ಕಲಬುರಗಿ:ಜೂ.13: 371(ಜೆ) ಕಲಂ ಪರಿಣಾಮಕಾರಿ ಅನುμÁ್ಠನ ಮತು ್ತ ಕಲ್ಯಾಣ ಕರ್ನಾಟಕದ ಪ್ರಗತಿಗಾಗಿ ಪ್ರತ್ಯೇಕ ಸಚಿವಾಲಯ ರಚನೆ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ರಾಜ್ಯ ಸರಕಾರಕ್ಕೆ ತಾಕೀತು ಮಾಡಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 371 (ಜೆ) ಅಡಿಯಲ್ಲಿ ನಿಜವಾಗ್ಯೂ ಅಭಿವೃದ್ಧಿ ಕಾರ್ಯಗಳು ನಡೆದಿವೆಯೋ ಇಲ್ಲವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ವೇಗ ಮಿತಿಯಲ್ಲಿ ಕೆಲಸಗಳು ನಡೆಯುವಂತೆ ಮೇಲುಸ್ತುವಾರಿ ವಹಿಸಲು ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ ಎಂದು ಸಲಹೆ ನೀಡಿದರು.
371(ಜೆ) ಕಲಂ ನಿಯಮಾವಳಿಯಂತೆ ನೇಮಕಾತಿಗಳಲ್ಲಿ ಕೃಪಾಂಕ ನೀಡಬೇಕು. ಇದರ ಜೊತೆಗೆ, ಎಲ್ಲರಿಗೂ ನ್ಯಾಯ ದೊರಕುವಂತಾಗಲು ವಯೋಮಾನದಲ್ಲಿ ವಿನಾಯಿತಿ ನೀಡಬೇಕು.371(ಜೆ) ಕಲಂ ಅಡಿ ಬರುವ ವ್ಯಾಜ್ಯಗಳ ನಿವಾರಣೆಗೆ ನಿಯಮದಂತೆ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಪ್ರತ್ಯೇಕ ಟ್ರಿಬ್ಯುನಲ್ ರಚನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯ ಸರಕಾರದ ಎಲ್ಲಾ ನೇಮಕಾತಿಗಳಿಗೆ ಮೊದಲು ಮೆರಿಟ್ ಮಾನದಂಡದ ಪಟ್ಟಿ ಪ್ರಕಟಿಸಿ ನಂತರ ನಮ್ಮ ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಾನದಂಡ ಅನುಸರಿಸಬೇಕು.ಈಗಾಗಲೇ ಕಲ್ಯಾಣ ಕರ್ನಾಟಕದ ಮತ್ತು ರಾಜ್ಯದ ಇತರೆ ಭಾಗದ ನೂರಾರು ಅರ್ಹ ಅಭ್ಯರ್ಥಿಗಳು ಆಯಾ ಇಲಾಖೆಗಳಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಆದೇಶ ಪತ್ರ ನೀಡದೆ ವಿನಾಕಾರಣ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಹೀಗಾಗಿ, ಕೂಡಲೇ ಸಂಬಂಧಿಸಿದ ಅಭ್ಯರ್ಥಿಗಳಿಗೆ ತಕ್ಷಣ ಸೇವಾ ಆದೇಶ ಪತ್ರ ನೀಡಬೇಕು ಎಂದು ಲಕ್ಷ್ಮಣ ದಸ್ತಿ ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು. 1956ರಿಂದ ಇಲ್ಲಿಯವರೆಗೆ ನೇಮಕಾತಿಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಮತ್ತುಕಲ್ಯಾಣ ಕರ್ನಾಟಕಕ್ಕೆ ನ್ಯಾಯ ಒದಗಿಸಲು ಎಲ್ಲ ಇಲಾಖೆಗಳ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ನುಡಿದರು.
ತಜ್ಞರ ಸಲಹಾ ಸಮಿತಿ ರಚಿಸಲು ಸಲಹೆ
ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಯ ದೃಷ್ಟಿಯಿಂದ ಹಾಗೂ 371(ಜೆ) ಕಲಂ ಪರಿಣಾಮಕಾರಿ ಅನುμÁ್ಠನಕ್ಕೆ ಕಲ್ಯಾಣ ಕರ್ನಾಟಕದ ಪರಿಣಿತರ, ತಜ್ಞ ಹೋರಾಟಗಾರರ ಸಲಹಾ ಸಮಿತಿ ರಚಿಸಬೇಕು ಎಂದು ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ರಾಜ್ಯ ಸರಕಾರಕ್ಕೆ ಸಲಹೆ ನೀಡಿದರು.