ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ
ಬೆಂಗಳೂರು,ಸೆ,೨೫-ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೫೦೦ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕಾಮಗಾರಿಗಳನ್ನು ಮಾಡದೆ ಬಿಲ್ ಪಡೆದಿರುವ ಸಂಕಷ್ಟ ಎದುರಾಗಿದೆ.
೨೦೨೦ ರಿಂದ ೨೦೨ರ ವರೆಗೆ ನಡೆದಿದೆ ಎನ್ನಲಾದ ಸುಮಾರು ೫೦೦ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕಾಮಗಾರಿಗಳನ್ನು ತನಿಖೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.ಬಿಬಿಎಂಪಿ ಕಂದಾಯ ಇಲಾಖೆಯ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಮಗಾರಿ ನಡೆಸದೇ ಬಿಲ್ ಮಾಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ಹೊರಡಿಸಲಾಗಿದ್ದು ಶಾಸಕ ಮುನಿರತ್ನಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗಿದೆ.ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಕ್ಷೇತ್ರಗಳ ಕಾಮಗಾರಿ ಸಂಬಂಧ ಕಾಮಗಾರಿ ನಡೆಸದೇ ಬಿಲ್ ಮಾಡಿಸಿಕೊಂಡ ಆರೋಪದಡಿ ಸಮಗ್ರ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ನಡೆಸದೇ ಬಿಲ್ ಮಾಡಿಸಿಕೊಂಡ ಆರೋಪದ ತನಿಖೆಗೆ ಬಿಬಿಎಂಪಿ ಕಂದಾಯ ವಿಶೇಷ ಆಯಿತ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಮತ್ತೊಂದು ಸಂಕಷ್ಟ ಎದುರಾಗಿದ್ದು ಸಮಸ್ಯೆಗೆ ಸಿಲುಕುವಂತಾಗಿದೆ.ಜೊತೆಗೆ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಇನ್ನಿತರೆ ಪ್ರಕರಣಗಳ ಕುರಿತೂ ಕೂಡ ತನಿಖೆ ನಡೆಸುವ ಸಾಧ್ಯತೆಗಳಿದ್ದು ಶಾಸಕ ಮುನಿರತ್ನ ಎದುರಾಗಿರುವ ಸಂಕಷ್ಠದಿಂದ ಪಾರಾಗುವುದು ಸದ್ಯಕ್ಕೆ ದೂರದ ಮಾತು ಎನ್ನಲಾಗಿದೆ.
ಒಂದು ಪ್ರಕರಣದಲ್ಲಿ ಜಾಮೀನು ಪಡೆದರೆ ಮತ್ತೊಂದು ಪ್ರಕರಣವನ್ನು ಸಿದ್ದಪಡಿಸಿಕೊಂಡಿದ್ದು ಶತಾಯ ಗತಾಯ ಶಾಸಕ ಮುನಿರತ್ನ ಅವರನ್ನು ಹಣಿಯಲು ರಾಜ್ಯ ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.