ವಾರ್ಷಿಕ ಸಭೆ
ನವಲಗುಂದ,ಸೆ.25: ಗ್ರಾಮದ ಜನರ ಅಭಿವೃದ್ಧಿಯಲ್ಲಿ ಸಹಕಾರಿ ಸಂಘವು ಪ್ರಮುಖ ಪಾತ್ರ ವಹಿಸುತ್ತಿದೆ ಅದನ್ನು ಉಳಿಸಿ ಗ್ರಾಮೀಣಾಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಬಸಾಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ನಿಂಗಪ್ಪ ಬಾರಕೇರ ಹೇಳಿದರು.
ನವಲಗುಂದ ವಿಧಾನಸಭಾ ಕ್ಷೇತ್ರದ ಬಸಾಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಪತ್ತಿನ ಸಂಘದ 2023 24 ನೇ ಸಾಲಿನ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಹಕಾರಿ ಸಂಘದ ತತ್ವದ ಉದ್ದೇಶಗಳನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.
ಸಹಕಾರ ಸಂಘದಲ್ಲಿ ಯಾರೂ ಸಹ ತಾವು ಯಾವುದೇ ವೈಯಕ್ತಿಕ ಲಾಭ ಪಡೆಯಲು ಪ್ರಯತ್ನಿಸಬಾರದು. ಸೇವಾ ಭಾವನೆಯಿಂದ ಕೆಲಸ ಮಾಡುವುದರಿಂದ ಇದರ ಪ್ರತಿಫಲವು ನೇರವಾಗಿ ರೈತರಿಗೆ ತಲುಪುತ್ತದೆ ಆದ್ದರಿಂದ ಸಹಕಾರ ಸಂಘಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡದಂತೆ ಅವುಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಮುಖ್ಯಕಾರ್ಯನಿರ್ವಾಹಕ ಬಿ ಆರ್ ಪಾಟೀಲ ನಿರ್ದೇಶಕರಾದ ಶಿವರಾಯಪ್ಪ ಜೈನರ, ಪುರದಪ್ಪ ಕಮತರ, ಚಂಬಣ್ಣ ಹಡಪದ, ದೇವೇಂದ್ರಪ್ಪ ಶೇಲ್ಲೆನ್ನವರ, ಸದ್ದಾಂ ಚಾಹುಸೇನ್, ಶಿವಪ್ಪ ಕೌಜಗೇರಿ ಸೇರಿದಂತೆ ಸಂಘದ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು